ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Live: ಕೊನೆಗೂ ನಮ್ಮ ರಾಮ ಬಂದಿದ್ದಾನೆ– ಪ್ರಧಾನಿ ನರೇಂದ್ರ ಮೋದಿ

Published : 22 ಜನವರಿ 2024, 2:58 IST
Last Updated : 22 ಜನವರಿ 2024, 12:59 IST
ಫಾಲೋ ಮಾಡಿ
02:5822 Jan 2024

ಇಂದು ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಅಯೋಧ್ಯೆ ನಗರ ಸಡಗರದಿಂದ ಸಜ್ಜಾಗಿದ್ದು, ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್‌ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಳ್ಳಲಿದ್ದಾರೆ. ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

03:0022 Jan 2024

ಇಂದಿನ ಕಾರ್ಯಕ್ರಮಗಳು: ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತ ಇರುವುದು 84 ಸೆಕೆಂಡುಗಳಷ್ಟು ಮಾತ್ರ. ಅದು 12 ಗಂಟೆ 29 ನಿಮಿಷ 8 ಸೆಕೆಂಡುಗಳಿಂದ 12 ಗಂಟೆ 30 ನಿಮಿಷ 32 ಸೆಕೆಂಡುಗಳವರೆಗೆ ಇರಲಿದೆ.  ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ಕಾರ್ಯಕ್ರಮವು 12.20ರಿಂದ 12.45ರವರೆಗೆ ನಡೆಯಲಿದೆ. ಮಹಾವಿಷ್ಣುವಿನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುರುವಾಗಲಿದೆ ಪುರೋಹಿತರು ಮಂತ್ರಗಳ ಮೂಲಕ ಶ್ರೀರಾಮನನ್ನು ಆವಾಹನೆ ಮಾಡುತ್ತಾರೆ ಗರ್ಭಗೃಹದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಧಿವಿಧಾನಗಳು ನಡೆಯುತ್ತವೆ.  ಧಾರ್ಮಿಕ ವಿಧಿವಿಧಾನಗಳನ್ನು 121 ಮಂದಿ ವೈದಿಕ ವಿದ್ವಾಂಸರು, ಆಚಾರ್ಯ ಗಣೇಶ್ವರ ದ್ರಾವಿಡ್ ಮತ್ತು ಆಚಾರ್ಯ ಲಕ್ಷ್ಮೀಕಾಂತ ದ್ವಿವೇದಿ ಮಾರ್ಗದರ್ಶನದಲ್ಲಿ ನಡೆಸಲಿದ್ದಾರೆ.  ಪ್ರಾಣ ಪ್ರತಿಷ್ಠಾಪನೆಯ ನಂತರದಲ್ಲಿ, ಅಯೋಧ್ಯೆಯಲ್ಲಿ ಸೋಮವಾರ ಸಂಜೆ ದೀಪೋತ್ಸವ ನಡೆಯಲಿದೆ. ಒಟ್ಟು ಹತ್ತು ಲಕ್ಷ ಹಣತೆಗಳನ್ನು ಬೆಳಗಿಸಲಾಗುತ್ತದೆ

03:0222 Jan 2024

ಬಾಲಿವುಡ್ ನಟ ವಿಕ್ಕಿ ಕೌಶಲ್, ನಟಿ ಕತ್ರಿನಾ ಕೈಫ್ ಅವರು ಮುಂಬೈನಿಂದ ಅಯೋಧ್ಯೆಗೆ ತೆರಳಿದರು.

03:1522 Jan 2024

ನನಗೆ ಭಗವಂತ ಹನುಮಂತನೇ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗ ಆಹ್ವಾನ ನೀಡಿದ್ದಾನೆ ಎಂದು ಅನಿಸುತ್ತಿದೆ ಎಂದು ನಟ ಚಿರಂಜೀವಿ ಹೇಳಿದ್ದಾರೆ. ಅವರು ಸಹ ಹೈದರಾಬಾದ್‌ನಿಂದ ಅಯೋಧ್ಯೆಯತ್ತ ತೆರಳಿದರು.

03:2322 Jan 2024

ಅಯೋಧ್ಯೆ ತಲುಪಿದ ನಟ ಅಮಿತಾಭ್ ಬಚ್ಚನ್, ಕ್ರಿಕೆಟಿಗ ವಿರಾಟ್ ಕೊಹ್ಲಿ

03:2922 Jan 2024

ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು ಪೂಜಾರಿಗಳು ವಿವಿಧ ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೊಕ್ತವಾಗಿ ನೆರವೇರಿಸುತ್ತಿದ್ದಾರೆ.

03:3722 Jan 2024

ಆರತಿ ವೇಳೆ ರಾಮ ಮಂದಿರದ ಮೇಲೆ ಸೇನಾ ಹೆಲಿಕಾಪ್ಟರ್‌ಗಳಿಂದ ಪುಷ್ಪ ಮಳೆ

03:4422 Jan 2024

ಭಾರತವು ಇಂದು ತನ್ನ ಸಂಪ್ರದಾಯಗಳು, ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಹೆಮ್ಮೆಪಡುತ್ತದೆ ಎಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್

ವಿದೇಶಾಂಗ ಸಚಿವ ಎಸ್. ಜೈಶಂಕರ್

04:3222 Jan 2024

ರಾಮ ಪ್ರಾಣ ಪ್ರತಿಷ್ಠಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಅವರು 10.25 ಕ್ಕೆ ದೆಹಲಿ ತಲುಪುವ ನಿರೀಕ್ಷೆ ಇದೆ.

04:3822 Jan 2024

ಇಂದಿನಿಂದ ರಾಮರಾಜ್ಯ ಶುರುವಾಗಲಿದೆ ಎಂದು ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ADVERTISEMENT
ADVERTISEMENT