ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

NEET | 1,563 ವಿದ್ಯಾರ್ಥಿಗಳ ಕೃಪಾಂಕ ರದ್ದು: ಮರು ಪರೀಕ್ಷೆಗೆ ಅವಕಾಶ

Published : 13 ಜೂನ್ 2024, 6:47 IST
Last Updated : 13 ಜೂನ್ 2024, 6:47 IST
ಫಾಲೋ ಮಾಡಿ
Comments

ನವದೆಹಲಿ: ನೀಟ್ ಪರೀಕ್ಷೆ ಫಲಿತಾಂಶದ ವಿವಾದಕ್ಕೆ ಸಂಬಂಧಿಸಿದಂತೆ 1,563 ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಗೊಳಿಸಿ, ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಪರ ವಕೀಲರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ರಜಾಕಾಲದ ಪೀಠಕ್ಕೆ ಈ ಮಾಹಿತಿ ನೀಡಿದರು. ಜೂನ್‌ 23ರಂದು ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದರು.

ಒಂದು ವೇಳೆ ಈ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಬಯಸದಿದ್ದರೆ, ಈ ಹಿಂದೆ ನಡೆದ ಪರೀಕ್ಷೆಯಲ್ಲಿ (ಕೃಪಾಂಕ ಬಿಟ್ಟು) ಪಡೆದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.

ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು. ಎಂಬಿಬಿಎಸ್, ಬಿಡಿಎಸ್, ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಈ ವೇಳೆ ಕೇಂದ್ರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT