ನವದೆಹಲಿ: ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆರಂಭಿಸಿರುವ ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠದಲ್ಲಿ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು, ಅಕ್ಟೋಬರ್ 30ರಂದು ಯೋಜನೆಯ ಕ್ರಮಬದ್ಧತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಈಗ ಸಂವಿಧಾನ ಪೀಠಕ್ಕೆ ವಿಚಾರಣೆಯನ್ನು ವರ್ಗಾಯಿಸಿದೆ.

2024ರ ಲೋಕಸಭಾ ಚುನಾವಣೆ ಆರಂಭವಾಗುವುದಕ್ಕೂ ಮೊದಲೇ ಈ ಅರ್ಜಿಗಳ ಅಂತಿಮ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ನ್ಯಾಯಪೀಠಕ್ಕೆ ಕೋರಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕು ಪಿಐಎಲ್ಗಳ ವಿಚಾರಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ₹12 ಸಾವಿರ ಕೋಟಿ ಈ ಬಾಂಡ್ಗಳ ಹೆಸರಿನಲ್ಲಿ ದೇಣಿಗೆ ರೂಪದಲ್ಲಿ ಪಾವತಿಯಾಗಿದೆ. ಈ ಮೊತ್ತದಲ್ಲಿ ಪ್ರಮುಖ ಪಕ್ಷವೊಂದಕ್ಕೆ ಮೂರನೇ ಎರಡರಷ್ಟು ಹಣ ಸಂದಾಯವಾಗಿದೆ ಎಂದು ಮಾರ್ಚ್ನಲ್ಲಿ ನಡೆದ ವಿಚಾರಣೆ ವೇಳೆ ಅರ್ಜಿದಾರರೊಬ್ಬರು ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.