ನವದೆಹಲಿ: ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಗುರುವಾರ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ತೀರ್ಪನ್ನು ಪ್ರಕಟಿಸಲಿದೆ ಎಂದು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಮಾಹಿತಿ ನೀಡಲಾಗಿದೆ.

ರಾಜ್ಯಗಳ ಜೈಲು ಕೈಪಿಡಿಗಳು ತಮ್ಮ ಜೈಲುಗಳಲ್ಲಿನ ಕೆಲಸದ ಹಂಚಿಕೆಯಲ್ಲಿ ತಾರತಮ್ಯವನ್ನು ತೋರಿಸುತ್ತವೆ ಮತ್ತು ಕೈದಿಗಳ ಜಾತಿಯ ಆಧಾರದ ಮೇಲೆ ಅವರಿಗೆ ಜೈಲಿನಲ್ಲಿ ಸ್ಥಳವನ್ನು ನೀಡಲಾಗುತ್ತದೆ. ಉದಾಹರಣೆಗೆ ಪಶ್ಚಿಮ ಬಂಗಾಳದ ಜೈಲು ಸಂಹಿತೆಯು ‘ಜಾತಿ ಆಧಾರದ ಮೇಲೆ ಜೈಲಿನಲ್ಲಿ ಕೆಲಸವನ್ನು ನೀಡಬೇಕು. ಅಡುಗೆ ಕೆಲಸವನ್ನು ಉನ್ನತ ಜಾತಿಯವರು ಮಾಡಬೇಕು ಮತ್ತು ಇತರ ಜಾತಿಗಳ ಜನರು ಕಸ ಗುಡಿಸುವಂತಹ ಉಳಿದ ಕೆಲಸಗಳನ್ನು ಮಾಡಬೇಕು’ ಎಂದು ಹೇಳುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದರು.

ಪ್ರಕರಣದ ವಿಚಾರಣೆಯ ವೇಳೆ ಈ ವರ್ಷದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಒಟ್ಟು 11 ರಾಜ್ಯಗಳ ಪ್ರತಿಕ್ರಿಯೆ ಕೇಳಿತ್ತು.

ಕೇಂದ್ರ ಗೃಹ ಸಚಿವಾಲಯವು ರೂಪಿಸಿರುವ ಮಾದರಿ ಜೈಲು ಕೈಪಿಡಿಗೆ ಅನುಗುಣವಾಗಿ ರಾಜ್ಯ ಕಾರಾಗೃಹಗಳ ಕೈಪಿಡಿಯನ್ನು ತಿದ್ದುಪಡಿ ಮಾಡಲಾಗಿದ್ದರೂ ಜೈಲುಗಳಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಮಹಾರಾಷ್ಟ್ರದ ಕಲ್ಯಾಣ್ ನಿವಾಸಿ ಸುಕನ್ಯಾ ಶಾಂತ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.