ನವದೆಹಲಿ: ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಲು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್, ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ವಿಭಾಗೀಯ ನ್ಯಾಯಪೀಠವು, ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಿತು.

ಚಂದ್ರಬಾಬು ಪರ ಹಿರಿಯ ವಕೀಲ ಹರೀಶ್ ಸಾಳ್ವೆ ಹಾಗೂ ಆಂಧ್ರಪ್ರದೇಶ ಸರ್ಕಾರದ ಪರ ಮುಕುಲ್ ರೋಹಟಗಿ ವಾದ ಮಂಡಿಸಿದರು.

ಕೌಶಲ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಲು ಕೋರಿ ಚಂದ್ರಬಾಬು ಅವರು, ಸಲ್ಲಿಸಿದ್ದ ಮನವಿಯನ್ನು ಆಂಧ್ರಪ್ರದೇಶದ ಹೈಕೋರ್ಟ್ ಅನೂರ್ಜಿತಗೊಳಿಸಿತ್ತು.

ಚಂದ್ರಬಾಬು ಅವರು 2015ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ನಿಗಮದಲ್ಲಿ ಅವ್ಯವಹಾರ ಎಸಗಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹371 ಕೋಟಿ ನಷ್ಟ ಉಂಟಾಗಿದೆ ಎಂಬ ಆರೋಪದ ಮೇಲೆ ಸೆಪ್ಟೆಂಬರ್ 9ರಂದು ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದರು. ಸದ್ಯ ಅವರು ರಾಜಮಹೇಂದ್ರವರಂ ಕಾರಾಗೃಹದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.