ಚೆನ್ನೈ: ಮರಳು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಶನಿವಾರ ತಮಿಳುನಾಡಿನ ಹಲವೆಡೆ ಶೋಧ ನಡೆಸಿತು.

‘ಲಾಟರಿ ಕಿಂಗ್‘ ಸ್ಯಾಂಟಿಗೊ ಮಾರ್ಟಿನ್ ಅವರ ಅಳಿಯ ಆಧವ್ ಅರ್ಜುನ್ ಅವರ ನಿವಾಸ ಸೆರಿದಂತೆ ಚೆನ್ನೈ ಮತ್ತು ಕೊಯಮತ್ತೂರಿನ ಹಲವರ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ತಮಿಳುನಾಡಿನಲ್ಲಿ ಮರಳು ಅಕ್ರಮ ಗಣಿಗಾರಿಕೆಯಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿರುವ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ 10 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ’ ಎಂದು ತಿಳಿಸಿವೆ.

ಸಿಕ್ಕಿಂ ಸರ್ಕಾರದ ಲಾಟರಿ ಮಾರಾಟಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿಯೂ ಮಾರ್ಟಿನ್ ಅವರು ಇ.ಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.