ಸುಲ್ತಾನ್ಪುರ (ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯ ಸಂಬಂಧ ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಉತ್ತರ ಪ್ರದೇಶದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಿತು.

ಪ್ರಕರಣದ ಸಂಬಂಧ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಜಾಮೀನು ನೀಡಿ, ಮುಂದಿನ ವಿಚಾರಣೆಯನ್ನು ಮಾರ್ಚ್ 2ಕ್ಕೆ ನಿಗದಿ ಮಾಡಿದೆ.

₹25,000 ಮೌಲ್ಯದ ಎರಡು ಬಾಂಡ್ ಪಡೆದ ನಂತರ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಿತು ಎಂದು ಅವರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದರು.

ಮಧ್ಯಾಹ್ನ 11ಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಂದ ರಾಹುಲ್, 25 ನಿಮಿಷಗಳ ನಂತರ ಹೊರಬಂದರು. ಅಲ್ಲಿಂದ ನೇರವಾಗಿ ರಾಯ್ಬರೇಲಿಗೆ ಪ್ರಯಾಣಿಸಿದರು. ಜನವರಿ 18ರಂದು ನಡೆದಿದ್ದ ವಿಚಾರಣೆಗೆ ಗೈರಾಗಿದ್ದ ರಾಹುಲ್ ಇಂದು ನ್ಯಾಯಾಲಯಕ್ಕೆ ಆಗಮಿಸುತ್ತಿದ್ದಂತೆಯೇ ‘ರಾಹುಲ್ ಗಾಂಧಿ ಜಿಂದಾಬಾದ್’, ‘ಭಾರತ್ ಜೋಡೋ’ ಎನ್ನುವ ಘೋಷಣೆಗಳು ಮೊಳಗಿದವು.

ಆರು ವರ್ಷಗಳ ಹಿಂದೆ ಕರ್ನಾಟಕದ ಚುನಾವಣೆಯ ವೇಳೆ ರಾಹುಲ್ ಗಾಂಧಿ ಅಮಿತ್ ಶಾ ವಿರುದ್ಧ ನೀಡಿದ್ದ ಹೇಳಿಕೆಯ ಸಂಬಂಧ ಬಿಜೆಪಿ ಕಾರ್ಯಕರ್ತ ವಿಜಯ್ ಮಿಶ್ರಾ 2018ರಲ್ಲಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.