ರಾಯ್‌ಬರೇಲಿ: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಚುರುಕುಗೊಂಡಿರುವಂತೆಯೇ ರಾಯ್‌ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಂಗ್ ಅವರು ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.ಏಳು ಹಂತಗಳ ಮತದಾನವು ಕ್ರಮವಾಗಿ ಫೆಬ್ರವರಿ10,14, 20, 23, 27, ಮಾರ್ಚ್ 3 ಮತ್ತು 7ರಂದು ನಡೆಯಲಿದೆಎಂದು ಚುನಾವಣಾ ಆಯೋಗ ತಿಳಿಸಿದೆ.

ಕಾಂಗ್ರೆಸ್ ಪಕ್ಷವು ಕಳೆದ30 ವರ್ಷಗಳಿಂದಲೂ ರಾಜ್ಯದಲ್ಲಿಅಧಿಕಾರದಲ್ಲಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಕಳೆದ (2017ರ) ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು312 ಸ್ಥಾನಗಳಲ್ಲಿ ಗೆದ್ದು ಭಾರೀಬಹುಮತ ಸಾಧಿಸಿತ್ತು. ಉಳಿದಂತೆಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು47 ಕಡೆ ಹಾಗೂ ಮಾಯಾವತಿ ನೇತೃತ್ವದ ಬಿಎಸ್‌ಪಿ19 ಕ್ಷೇತ್ರಗಳಲ್ಲಿ ಜಯ ಕಂಡಿದ್ದವು. ಕಾಂಗ್ರೆಸ್ ಏಳು ಸ್ಥಾನಗಳಲ್ಲಿ ಮಾತ್ರವೇ ಜಯದ ನಗೆ ಬೀರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.