ಇಂಫಾಲ್: ಕಳೆದೊಂದು ವರ್ಷದಿಂದ ವ್ಯಾಪಕ ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಇದೀಗ ಮತ್ತೊಮ್ಮೆ ಕುಕಿ ಮತ್ತು ಮೈಥೇಯಿ ಸಮುದಾಯಗಳ ಜನರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯ ಥಮ್ನಾಪೋಪ್ಕಿ ಹಾಗೂ ಲಾಮ್ಲಾಯಿ ಪ್ರದೇಶಗಳನ್ನು ಗುರಿಯಾಗಿಸಿ ನೆರೆಯ ಜಿಲ್ಲೆ ಕಾಂಗ್ಪೋಪ್ಕಿ ಜಿಲ್ಲೆಯ ಬೆಟ್ಟಗಳ ಮೇಲಿಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಆಗ ಗ್ರಾಮ ರಕ್ಷಣೆಯ ಸ್ವಯಂ ಸೇವಕರು ಪ್ರತಿದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸದ್ಯ ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ. ಘಟನೆಯಲ್ಲಿ ಯಾವುದೇ ಸಾವು–ನೋವುಗಳು ವರದಿಯಾಗಿಲ್ಲ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.