ಮುಂಬೈ: ಸೋಮಾಲಿಯಾದ ಕರಾವಳಿ ಬಳಿ ಕೈಗೊಂಡ ಕಾರ್ಯಾಚರಣೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾದ 35 ಕಡಲುಗಳ್ಳರನ್ನು ಹೊತ್ತುತಂದ ಭಾರತೀಯ ಯುದ್ಧನೌಕೆ ‘ಐಎನ್ಎಸ್ ಕೋಲ್ಕತ್ತ’ವು ಶನಿವಾರ ಬೆಳಿಗ್ಗೆ ಮುಂಬೈ ತಲುಪಿದೆ. ಕಡಲುಗಳ್ಳರನ್ನು ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ನೌಕಾಪಡೆ ತಿಳಿಸಿದೆ.

ಹಡಗುಗಳು ಮತ್ತು ಅವುಗಳ ಸಿಬ್ಬಂದಿಯ ಸುರಕ್ಷತೆಗಾಗಿ ಕೈಗೊಂಡಿರುವ ‘ಸಂಕಲ್ಪ ಕಾರ್ಯಾಚರಣೆ’ಯ ಭಾಗವಾಗಿ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರ ಮತ್ತು ಅಡೆನ್ ಖಾರಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸಿದೆ. ಈ ಕಾರ್ಯಾಚರಣೆ ವೇಳೆ 35 ಕಡಲುಗಳ್ಳರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಭಾರತೀಯ ಕಾನೂನು, ಅದರಲ್ಲೂ ವಿಶೇಷವಾಗಿ ಕಡಲುಗಳ್ಳತನ ಕಾಯ್ದೆ– 2022ರ ಅನ್ವಯ ಅವರ ವಿರುದ್ಧ ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನೌಕಾಪಡೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.