ಮೇದಿನಿನಗರ: ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಇಬ್ಬರು ಹಿರಿಯ ಅಧಿಕಾರಿಗಳ ಕಾರು ಚಾಲಕರು 32 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯವೆಸಗಿದ ಕಾರು ಚಾಲಕರಾದ ಧರ್ಮೇಂದ್ರ ಕುಮಾರ್ ಹಾಗೂ ಪ್ರಕಾಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳು ಮತ್ತು ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗುರುವಾರ ಬೆಳಿಗ್ಗೆ ಮಹಿಳೆಯು ಚಿಕಿತ್ಸೆಗೆಂದು ಮೇದಿನಿನಗರಕ್ಕೆ ತೆರಳಲು ಡಾಲ್ಟೊಗಂಜ್ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಇಬ್ಬರು ಆರೋಪಿಗಳು ತನ್ನನ್ನು ನಂಬಿಸಿ, ರೈಲು ನಿಲ್ದಾಣದ ಬಳಿ ಇರುವ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಈ ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.