ವಿಜಯಪುರ: ‘ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಮುಖ್ಯಮಂತ್ರಿ ಹುದ್ದೆಯನ್ನು ₹2,500 ಕೋಟಿಗೆ ನಿಗದಿಪಡಿಸಿದ್ದರು. ಬಹುಶಃ ಈಗ ಅವರ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೂ ನೂರಾರು ಕೋಟಿಗಳನ್ನು ನಿಗದಿಪಡಿಸಿ ಮಾರಾಟಕ್ಕೆ ಇಟ್ಟಿರಬೇಕು’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಲೇವಡಿ ಮಾಡಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಸರ್ಕಾರವು ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವುದು ಅವರ ಘನತೆಗೆ ತಕ್ಕನಾಗಿಲ್ಲ. ಒಬ್ಬ ಕೇಂದ್ರ ಸಚಿವರಾಗಿ ಅವರು ಹೀಗೆಲ್ಲ ಮಾತನಾಡಬಾರದು.

ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಇವೆಲ್ಲವೂ ಇರುವುದು ಬಡವರ ಒಳಿತಿಗಾಗಿಯೇ ವಿನಃ ಶ್ರೀಮಂತರಿಗಲ್ಲ ಎನ್ನುವುದನ್ನು ಅವರು ಅರಿಯಬೇಕು ಎಂದು ಸಚಿವರು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.