ಬೆಂಗಳೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿನೋಡಿಕೊಂಡ ಹಾಗಾಯಿತು ಎಂದು ಹೇಳಿದ್ದಾರೆ.

‘ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ - ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
.ಕೆಲವು ಮೊಕದ್ದಮೆ ವಾಪಸ್ ಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ: ಸಿದ್ದರಾಮಯ್ಯ.
‘ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ.

ಇದು ದಸರಾದ ಆಶಯವೂ ಆಗಿದೆ’ ಎಂದು ಜಾಹೀರಾತನ್ನು ಸಮರ್ಥಿಸಿಕೊಂಡಿದ್ದಾರೆ.
.ಸಚಿವರ ಪ್ರತ್ಯೇಕ ಸಭೆ: ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅತೃಪ್ತಿ.
‘ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ ಹಾಗಾಯಿತು’ ಎಂದು ಹೇಳಿದ್ದಾರೆ.
.ಮುಡಾ ಪ್ರಕರಣ: CM ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆಗೆ ಹಾಜರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.