ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ಭರ್ತಿಗೆ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿನ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜತೆ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹೊಂದಿರುವ ನಂಟಿನ ಕುರಿತು ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಆಗ್ರಹಿಸಿದೆ.

ದಿವ್ಯಾ ಅವರು ಉಮೇಶ್ ಜಾಧವ್ ಅವರ ಜತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಮೂಲಕ ಆಯೋಗಕ್ಕೆ ದೂರು ಸಲ್ಲಿಸಿರುವ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ‘ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗಿರುವ ದಿವ್ಯಾ ಜತೆ ಜಾಧವ್ ಗುರುತಿಸಿಕೊಳ್ಳುತ್ತಿರುವುದರಿಂದ ನ್ಯಾಯದಾನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತಾಗುತ್ತದೆ’ ಎಂದು ದೂರಿದ್ದಾರೆ.

‘ಸಂಸದರಾಗಿರುವ ಜಾಧವ್, ತಮ್ಮ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವ ಅಪಾಯವಿದೆ. ಇದು ನ್ಯಾಯದಾನ ಪ್ರಕ್ರಿಯೆಯಲ್ಲಿ ನ್ಯಾಯಾಂಗದ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಸಾಧ್ಯತೆ ಇದೆ’ ಎಂದು ದೂರಿನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.