ಯಾದಗಿರಿ: ಜಿಲ್ಲೆಯ ಸುರಪುರದ ಹಾಲಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ 20 ದಿನಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

ರಾಜಾ ವೆಂಕಟಪ್ಪ ನಾಯಕ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆ: ರಾಜಾ ವೆಂಕಟಪ್ಪ ನಾಯಕ ಅವರು ನಾಲ್ಕು ಬಾರಿ ಸುರಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

1994 ಕರ್ನಾಟಕ ಕಾಂಗ್ರೆಸ್ ಪಾರ್ಟಿ (ಕೆಸಿಪಿ), 1999, 2013, 2023 ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ್ದರು.

ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಕೆಲ ದಿನಗಳ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.