ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ನನ್ನ ವಿರುದ್ಧ ದಾಖಲಿಸಲಾಗಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ಅರ್ಜಿದಾರರ ಪರ ಮನವಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವಾದ 42ನೇ ಎಸಿಎಂಎಂ ಕೋರ್ಟ್ನಲ್ಲಿ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯ ಮುಂದಿನ ವಿಚಾರಣಾ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿತು.

ಪ್ರಕರಣವೇನು?: ‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನವಲಗುಂದದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಜಮೀರ್ ಅಹಮದ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಾರಿಯಲ್ಲಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿ 2018ರ ಮೇ 5ರಂದು ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದರು.

ಇದರನ್ವಯ ಜಮೀರ್ ಅಹಮದ್ ವಿರುದ್ಧ ತನಿಖೆ ನಡೆಸಿದ್ದ ಪೊಲೀಸರು ಭಾರತೀಯ ದಂಡ ಸಂಹಿತೆ–1860ರ ಕಲಂ 171(ಎಚ್) ಮತ್ತು 34ನೇ ಅಡಿಯಲ್ಲಿ 42ನೇ ಎಸಿಎಂಎಂನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.