ಬೆಂಗಳೂರು: ‘ರೈತರ ಭೂಮಿ ರೈತರಿಗೇ ಹೋಗಲಿದೆ. ಸರ್ಕಾರಿ ಭೂಮಿ ಆಗಿದ್ದರೆ ಸರ್ಕಾರಕ್ಕೆ ಹೋಗಲಿದೆ. ರೈತರ ಒಂದಿಂಚು ಆಸ್ತಿಯೂ ವಕ್ಫ್ ಆಸ್ತಿ ಆಗುವುದಿಲ್ಲ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವಕ್ಫ್ ಆಸ್ತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ’ ಎಂದರು.

‘ವಕ್ಫ್ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಲಿಂಗಾಯತ, ಒಕ್ಕಲಿಗ, ದಲಿತ ಹೀಗೆ ಯಾರಿಗೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ’ ಎಂದರು.

‘ವಕ್ಫ್ ಭೂಮಿ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ. ಆದರೆ, ನಮ್ಮ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ’ ಎಂದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಗ್ಯಾರಂಟಿ ಯೋಜನೆಗಳನ್ನು ಅವರು (ಬಿಜೆಪಿ) ನೀಡಿದರೆ ಆರ್ಥಿಕ ಹೊಡೆತ ಇಲ್ಲ. ನಾವು ನೀಡಿದರೆ ಆರ್ಥಿಕ ಹೊಡೆತ ಬೀಳುತ್ತದೆ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.