ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಎಲ್ಲ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ನ ಸಿ.ಪಿ.ಯೋಗೇಶ್ವರ್, ಶಿಗ್ಗಾವಿಯಲ್ಲಿ ಯಾಸೀರ ಅಹಮದ್ ಖಾನ್ ಪಠಾಣ ಮತ್ತು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಜಯಭೇರಿ ಮೊಳಗಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.
.Karnataka Bypoll Results ಗ್ಯಾರಂಟಿ, ಅಭಿವೃದ್ಧಿಯ ಗೆಲುವು: ಡಿ.ಕೆ.ಶಿವಕುಮಾರ್.
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಸಿಎಂ ಪೋಸ್ಟ್ನಲ್ಲಿ ಹೇಳಿದ್ದಾರೆ.
.Karnataka Bypoll |3 ಕ್ಷೇತ್ರಗಳ ಉಪಚುನಾವಣೆ: ಗೆಲುವಿನ ಕಾರ್ಯತಂತ್ರದತ್ತ ಹೆಜ್ಜೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.