ಬೆಂಗಳೂರು: ರಾಜ್ಯದ ಶಿಗ್ಗಾವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚುನಾವಣಾ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಶಿಗ್ಗಾವಿಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಚನ್ನಪಟ್ಟಣದಲ್ಲಿ ಸ್ಪರ್ಧಿಸಿದಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ.

ಸಂಡೂರಿನ 'ಕಮಲ' ಅಭ್ಯರ್ಥಿ ಬಂಗಾರು ಹನುಮಂತೂ ಅವರೂ ಪರಾಭವಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್, ಮೈತ್ರಿ ಪಕ್ಷಗಳಾದ ಬಿಜೆಪಿ–ಜೆಡಿಎಸ್ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಗಳ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.

ಮೂರೂ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿತ್ತು. ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಬೆಳಿಗ್ಗೆ 8ರಿಂದ ಆರಂಭವಾಗಲಿದೆ. ಎಲ್ಲ ಕೇಂದ್ರಗಳಲ್ಲಿಯೂ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆಗೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನೆರವೇರಲಿದೆ. ಕಡಿಮೆ ಅಭ್ಯರ್ಥಿಗಳಿರುವ ಸಂಡೂರು, ಶಿಗ್ಗಾವಿ ಕ್ಷೇತ್ರದ ಫಲಿತಾಂಶ ಬಹುಬೇಗ ದೊರಕಬಹುದು. ಅತಿ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದ ಚನ್ನಪಟ್ಟಣ ಕ್ಷೇತ್ರದ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸಿಗುವ ನಿರೀಕ್ಷೆ ಇದೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,36,348 ಮತದಾರರಿದ್ದು ಈ ಬಾರಿ 1,80,189 ಮತಗಳು ಚಲಾವಣೆಯಾಗಿವೆ. 1,17,885 ಪುರುಷರ ಪೈಕಿ 99,922 ಮತದಾನ ಮಾಡಿದ್ದಾರೆ. 1,18,435 ಮಹಿಳೆಯರ ಪೈಕಿ, ಮತದಾನದ ಮಾಡಿದವರು 88,255 ಮಾತ್ರ. ಈ ಅಂಶ ಕಾಂಗ್ರೆಸ್ ತಲೆ ಕೆಡಿಸಿದೆ.

ರಾಮನಗರದ ಚನ್ನಪಟ್ಟಣ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹಾಗೂ ಚನ್ನಪಟ್ಟಣ ಚುನಾವಣಾಧಿಕಾರಿ ಬಿನೋಯ್ ಪಿ.ಕೆ ಸಮ್ಮುಖದಲ್ಲಿ ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಸ್ಟ್ರಾಂಗ್ ರೂಂ ಅನ್ನು ಸಿಬ್ಬಂದಿ ತೆರೆದರು.

ನಂತರ ಸ್ಟ್ರಾಂಗ್ ರೂಂನಲ್ಲಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ಎಣಿಕೆ ಕೊಠಡಿಗೆ ಸ್ಥಳಾಂತರಿಸಲಾಯಿತು. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂಗಳ ಎಣಿಕೆ ಶುರುವಾಗಲಿದೆ.

ಕ್ಷೇತ್ರದ ಫಲಿತಾಂಶವು ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಎಣಿಕೆ ಕೇಂದ್ರದ ಹೊರಭಾಗದಲ್ಲಿ ಜಮಾಯಿಸಿದ್ದಾರೆ.

ಹಾವೇರಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದ್ದು, ಚುನಾವಣಾ ಏಜೆಂಟರ ಸಮ್ಮುಖದಲ್ಲಿ ಮತಯಂತ್ರಗಳ ಭದ್ರತಾ ಕೊಠಡಿ ತೆರೆಯಲಾಗಿದೆ.

ಇಲ್ಲಿಯ ದೇವಗಿರಿ ಬಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.

ಮತದಾನದ ನಂತರ ಮತಯಂತ್ರಗಳನ್ನು ಭದ್ರತಾ ಕೊಠಡಿಗೆ ಸಾಗಿಸಲಾಗಿತ್ತು.

ಬೆಳಿಗ್ಗೆ 7 ಗಂಟೆಗೆ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ಏಜೆಂಟರು ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದಾರೆ. ಚುನಾವಣಾ ಆಯೋಗದ ನಿಯಮಗಳ ಅನ್ವಯ ಮತ ಎಣಿಕೆ ಪ್ರಕ್ರಿಯೆ ಇದೀಗ ಆರಂಭವಾಗಲಿದೆ.

ಮೊದಲಿಗೆ ಅಂಚೆ ಹಾಗೂ ಸೇವಾ ಮತದಾರರ ಮತ ಎಣಿಕೆ ಆಗಲಿದೆ. ನಂತರ, ಮತಯಂತ್ರಗಳ ಎಣಿಕೆ ಶುರುವಾಗಲಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಎಣಿಕೆಗೆ ಹಾಜರಾಗಿದ್ದಾರೆ. 524 ಅಂಚೆ ಮತದಾರರು ಹಾಗೂ 24 ಸೇವಾ ಮತದಾರರು ಇದ್ದಾರೆ. ಇವರ ಮತ ಎಣಿಕೆ ಮುಕ್ತಾಯಗೊಂಡಿದೆ.

ನಂತರ, ಭದ್ರತಾ ಕೊಠಡಿಯಿಂದ ಮತಯಂತ್ರಗಳನ್ನು ಮತ ಎಣಿಕೆ ಟೇಬಲ್ಗೆ ರವಾನಿಸಲಾಗಿದೆ. ಅಲ್ಲಿಯೇ ಮತ ಎಣಿಕೆ ಶುರುವಾಗಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆಯ ಮೊದಲ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು 5,188 ಮತ ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ 4,964 ಮತ ಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ 224 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಸಂಡೂರು ವಿಧಾನಸಭೆ ಉಪ ಚುನಾವಣೆಯ ಉಪಚುನಾವಣೆಯ ಮತ ಎಣಿಕೆಯ ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ವಿರುದ್ಧ ಅನ್ನಪೂರ್ಣ 2715 ಮತಗಳ ಮುನ್ನಡೆ ಪಡೆದಿದ್ದಾರೆ.

ಕಾಂಗ್ರೆಸ್ 11,770 ಮತ ಪಡೆದರೆ, ಬಿಜೆಪಿ 9,055 ಮತ ಗಳಿಸಿದೆ.

ಬಿಜೆಪಿಗೆ 814 ಮತಗಳ ಮನ್ನಡೆ

ಬಿಜೆಪಿಯ ಭರತ್ ಬೊಮ್ಮಾಯಿಗೆ 5,997 ಮತಗಳು

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣಗೆ 5,183 ಮತಗಳು

ಬಳ್ಳಾರಿ: ಸಂಡೂರು ಉಪಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಮೂರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ, ಮತಗಳ ಅಂತರ ಕಡಿಮೆಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿ 1973 ಮತಗಳ ಮುನ್ನಡೆ ಪಡೆದಿದ್ದಾರೆ.

ಕಾಂಗ್ರೆಸ್ 15874 ಮತ ಪಡೆದರೆ, ಬಿಜೆಪಿ 13901 ಮತ ಗಳಿಸಿದೆ.

ಸಂಡೂರು ಉಪಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ, ಮತಗಳ ಅಂತರದಲ್ಲಿ ಈಗ ಮತ್ತಷ್ಟು ಕುಸಿತವಾಗಿದೆ.

ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ 1973 ಮತಗಳ ಮುನ್ನಡೆ ಪಡೆದಿತ್ತು. ನಾಲ್ಕನೇ ಸುತ್ತಿನಲ್ಲಿ 1001 ಮುನ್ನಡೆ ಇದೆ.

ಸದ್ಯ, ಕಾಂಗ್ರೆಸ್ ಅಭ್ಯರ್ಥಿ 20,128 ಮತ ಪಡೆದರೆ, ಬಿಜೆಪಿ 19,127 ಮತ ಗಳಿಸಿದೆ.

ಮೊದಲ ಸುತ್ತು

ಜೆಡಿಎಸ್ ಅಭ್ಯರ್ಥಿನಿಖಿಲ್ ಕುಮಾರಸ್ವಾಮಿ: 5,075

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 5,124

ಮುನ್ನಡೆ: 49 ಯೋಗೇಶ್ವರ್

ಎರಡನೇ ಸುತ್ತು

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 10,204

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 10,069

ನಿಖಿಲ್ಗೆ 135 ಮತಗಳ ಮುನ್ನಡೆ

ಮೂರನೇ ಸುತ್ತು

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 15,307

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 14,460

ನಿಖಿಲ್ಗೆ 847 ಮತಗಳ ಮುನ್ನಡೆ

ಶಿಗ್ಗಾವಿಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಬಿಜೆಪಿಯ ಭರತ್ ಬೊಮ್ಮಾಯಿ: 4,886

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 5,585

ಶಿಗ್ಗಾವಿಯಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮತ್ತೆ ಮುನ್ನಡೆ ಗಳಿಸಿಕೊಂಡಿದ್ದಾರೆ.

ಬಿಜೆಪಿಯ ಭರತ್ ಬೊಮ್ಮಾಯಿ: 5,839

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 4,712

ಚನ್ನಪಟ್ಟಣದಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಹಾವು–ಏಣಿ ಆಟ ಮುಂದುವರಿದಿದೆ.

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 20,676

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 19,521

* ನಿಖಿಲ್ ಮುನ್ನಡೆ: 1155

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಜಿದ್ದಾಜಿದ್ದಿಯಿಂದ ನಡೆಯುತ್ತಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಅಲ್ಪ ಮತಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ನಾಲ್ಕು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 21,910 ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ ಅಹಮದ ಖಾನ್ ಪಠಾಣ 20,343 ಮತ ಗಳಿಸಿದ್ದಾರೆ.

ಭರತ್ ಬೊಮ್ಮಾಯಿ ಅವರು 1,567 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಆರಂಭಿಕ ಮುನ್ನಡೆ ಪಡೆದಿದ್ದು, ಪಕ್ಷದ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಸುತ್ತ ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ.

ಕಾಂಗ್ರೆಸ್, ಸಿಎಂ ಸಿದ್ದರಾಮಯ್ಯ ಪರ ಘೋಷಣೆ, ಜೈಕಾರಗಳನ್ನು ಕೂಗಲಾಗುತ್ತಿದೆ.

19 ಸುತ್ತು ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಐದು ಸತ್ತು ಪೂರ್ಣಗೊಂಡಿದೆ.

ಐದನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 25,649

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 24,343

* ನಿಖಿಲ್ ಮುನ್ನಡೆ: 1,036

ಬಿಜೆಪಿಗೆ 1,835 ಮತಗಳ ಮುನ್ನಡೆ

ಬಿಜೆಪಿಯ ಭರತ್ ಬೊಮ್ಮಾಯಿ: 27,432 ಮತಗಳು

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 25,597 ಮತಗಳು

6ನೇ ಸುತ್ತು ಮುಕ್ತಾಯದ ಬಳಿಕ ಬಿಜೆಪಿಯ ಮುನ್ನಡೆ ಅಂತರ (662ಕ್ಕೆ) ಕುಸಿದೆ.

ಬಿಜೆಪಿ ಅಭ್ಯರ್ಥಿ 32,787 ಮತ ಗಳಿಸಿದ್ದು, ಕಾಂಗ್ರೆಸ್ ಸ್ಪರ್ಧಿಗೆ 32,125 ಮತಗಳು ಸಿಕ್ಕಿವೆ.

ಆರನೇ ಸುತ್ತಿನ ಬಳಿಕ ನಿಖಿಲ್ ಕುಮಾರಸ್ವಾಮಿಗೆ 30,675 ಮತ ಹಾಗೂ ಯೋಗೇಶ್ವರ್ಗೆ 29,891 ಮತಗಳು ಸಿಕ್ಕಿವೆ.

ಯೋಗೇಶ್ವರ್ಗೆ 783 ಮತಗಳ ಹಿನ್ನಡೆ ಎದುರಾಗಿದೆ.

ಬಿಜೆಪಿಯ ಭರತ್ ಬೊಮ್ಮಾಯಿ: 38,607 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ 37,609 ಮತಗಳನ್ನು ಪಡೆದಿದ್ದಾರೆ. ಬಿಜೆಪಿಗೆ 998 ಮತಗಳ ಮುನ್ನಡೆ ಲಭಿಸಿದೆ.

ಕಾಂಗ್ರೆಸ್: 38,373 ಮತಗಳು

ಬಿಜೆಪಿ: 38,340 ಮತಗಳು

ಕಾಂಗ್ರೆಸ್ 33 ಮತಗಳ ಮುನ್ನಡೆ

ಕಾಂಗ್ರೆಸ್: 44,463 ಮತಗಳು

ಬಿಜೆಪಿ: 43,555 ಮತಗಳು

ಕಾಂಗ್ರೆಸ್ 1,108 ಮತಗಳ ಮುನ್ನಡೆ

ಪಟ್ಟಣದ ಬೂತ್ಗಳ ಎಣಿಕೆಯಲ್ಲಿ ಪುಟಿದೆದ್ದು, ನಿಖಿಲ್ ಹಿಂದಿಕ್ಕಿದ ಯೋಗೇಶ್ವರ್ 3,959 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 33,628 ಮತಗಳು

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 37,587 ಮತಗಳು

ಏಳನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯದ ಹಂತಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 3,500 ಮತಗಳ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಹಾಗೂ ಯೋಗೇಶ್ವರ್ ಅವರಿಗೆ ಜಯಗೋಷ ಕೂಗಿದರು.

8ನೇ ಸುತ್ತು

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 34,808 ಮತಗಳು

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 45,982 ಮತಗಳು

* ಯೋಗೇಶ್ವರ್ ಮುನ್ನಡೆ: 11,174 ಮತಗಳು

ಎಂಟನೇ ಸುತ್ತಿನ ನಂತರ ಸಿ.ಪಿ ಯೋಗೇಶ್ವರ್ ಅವರು 11,000ಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಹೊರಗೆ ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ 335 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

ಬಿಜೆಪಿಯ ಭರತ್ ಬೊಮ್ಮಾಯಿ: 48,822 ಮತಗಳು

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 49,177 ಮತಗಳು

ಸಂಡೂರು ವಿಧಾನಸಭಾ ಕ್ಷೇತ್ರದ ಅರ್ಧ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಒಟ್ಟು 19 ಸುತ್ತುಗಳ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದರಲ್ಲಿ ಈವರೆಗೆ 10 ಸುತ್ತುಗಳು ಮುಕ್ತಾಯಗೊಂಡಿವೆ.

ಹತ್ತನೇ ಸುತ್ತಿನಲ್ಲಿ ಅನ್ನಪೂರ್ಣ 3,488 ಮತಗಳಿಂದ ಮುಂದಿದ್ದಾರೆ. ಕಾಂಗ್ರೆಸ್ 50,692 ಮತ ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ 47,204 ಮತ ಪಡೆದು ಹಿಂದೆ ಬಿದ್ದಿದ್ದಾರೆ.

ಚನ್ನಪಟ್ಟಣದಲ್ಲಿ 9ನೇ ಸುತ್ತಿನ ಎಣಿಕೆ ಬಳಿಕ ಯೋಗೇಶ್ವರ್ ಭಾರಿ (17,849) ಮುನ್ನಡೆ ಸಾಧಿಸಿದ್ದಾರೆ.

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 37,286 ಮತಗಳು

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 55,135 ಮತಗಳು

ಕಾಂಗ್ರೆಸ್ಗೆ 6,479 ಮತಗಳ ಮುನ್ನಡೆ.

ಬಿಜೆಪಿಯ ಭರತ್ ಬೊಮ್ಮಾಯಿ: 51,790 ಮತಗಳು

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 58,269 ಮತಗಳು

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಮತ ಎಣಿಕೆಯ 11ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಭಾರಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ಗೆ 12,793 ಮತಗಳ ಮುನ್ನಡೆ.

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 68,078 ಮತಗಳು

ಬಿಜೆಪಿಯ ಭರತ್ ಬೊಮ್ಮಾಯಿ: 55,285 ಮತಗಳು

10ನೇ ಸುತ್ತಿನ ಮತ ಎಣಿಕೆ ಮುಕ್ತಾಯ

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 61,265 ಮತಗಳು

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 41,472 ಮತಗಳು

* ಯೋಗೇಶ್ವರ್ ಮುನ್ನಡೆ: 19,793 ಮತಗಳು

ಸಂಡೂರಿನಲ್ಲಿ 16 ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ – 83,368 ಮತಗಳು

ಬಿಜೆಪಿ – 74,487 ಮತಗಳು

ಚನ್ನಪಟ್ಟಣದಲ್ಲಿ 12ನೇ ಸುತ್ತಿನ ಮತ ಎಣಿಕೆ ಮುಗಿದಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಮುನ್ನಡೆಯ ಅಂತರ 22,063ಕ್ಕೆ ಏರಿಕೆಯಾಗಿದೆ.

ಯೋಗೇಶ್ವರ್ 73,143 ಮತಗಳನ್ನು ಪಡೆದಿದ್ದರೆ, ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ 51,080 ಮತ ಗಳಿಸಿದ್ದಾರೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಗೆಲುವಿನತ್ತ ಸಾಗಿದೆ.

ಬೆಳಿಗ್ಗೆಯಿಂದ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಸೋಲಿನ ಮುನ್ಸೂಚನೆ ದೊರೆಯುತ್ತಿದ್ದಂತೆ ಮತ ಎಣಿಕೆ ಕೇಂದ್ರದಿಂದ ಹೊರಬಂದು ವಾಹನ ಏರಿ ಹೊರಟರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಕಾಂಗ್ರೆಸ್ ಸರ್ಕಾರ ಹಣದ ಹೊಳೆ ಹರಿಸಿದೆ' ಎಂದರು.

'ಶಿಗ್ಗಾವಿ ಜನತೆಗೆ ಕೃತಜ್ಣತೆ ಅರ್ಪಿಸುವೆ. ಸೋಲಿಗೆ ಕಾರಣವೇನು? ಎಂಬ ಬಗ್ಗೆ ಬೂತ್ ಮಟ್ಟದಲ್ಲಿ ಚರ್ಚಿಸಲಾಗುವುದು' ಎಂದರು.

ಚನ್ನಪಟ್ಟಣದಲ್ಲಿ 17ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭರ್ಜರಿ 25,745 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಸಿ.ಪಿ.ಯೋಗೇಶ್ವರ್ – 99,073 ಮತಗಳು

ನಿಖಿಲ್ ಕುಮಾರಸ್ವಾಮಿ – 73,328 ಮತಗಳು

ಕಾಂಗ್ರೆಸ್ಗೆ 13,478 ಮತಗಳ ಮುನ್ನಡೆ.

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ: 93,234 ಮತಗಳು

ಬಿಜೆಪಿಯ ಭರತ್ ಬೊಮ್ಮಾಯಿ: 79,756 ಮತಗಳು

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 1,04,164

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 77,702

* ಯೋಗೇಶ್ವರ್ ಮುನ್ನಡೆ: 26,462

ಸಂಡೂರು ಉಪಚುನಾವಣೆ ಮತ ಎಣಿಕೆ ಪೂರ್ಣಗೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು 9,645 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರಿಗೆ ಒಟ್ಟು 93,616 ಮತಗಳು ಲಭಿಸಿವೆ. ಎದುರಾಳಿ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು 83,967 ಮತಗಳನ್ನು ಪಡೆದಿದ್ದಾರೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

ನಾಲ್ಕು ಅವಧಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಕೈ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಾಸೀರ ಅಹಮದ್ ಖಾನ್ ಪಠಾಣ ಯಶಸ್ವಿಯಾಗಿದ್ದಾರೆ.

ಅಂತಿಮ (18ನೇ) ಸುತ್ತಿನ ಮತ ಎಣಿಕೆ ಬಳಿಕ, ಕಾಂಗ್ರೆಸ್ ಪಕ್ಷವು 13,448 ಮತಗಳ ಗೆಲುವು ಸಾಧಿಸಿದೆ.

ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ ಅವರು 1,00,587 ಮತ ಪಡೆದಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರ ಮಗನಾದ ಬಿಜೆಪಿಯ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು 86,960 ಮತ ಪಡೆದು ಪರಾಭವಗೊಂಡಿದ್ದಾರೆ.

ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಜಯಬೇರಿ ಭಾರಿಸಿದ್ದಾರೆ.

ಒಟ್ಟು 20 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಅಂಚೆ ಮತಗಳನ್ನು ಹೊರತುಪಡಿಸಿ, 25,357 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಕಳೆದೆರೆಡು ಚುನಾವಣೆಗಳಲ್ಲಿಯೂ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸತತ ಮೂರನೇ ಭಾರಿಯು ಪರಾಭವಗೊಳ್ಳುವ ಮೂಲಕ ಹ್ಯಾಟ್ರಿಕ್ ಮುಖಭಂಗ ಅನುಭವಿಸಿದ್ದಾರೆ.

ಸತತ ಮೂರನೇ ಸೋಲು ತಪ್ಪಿಸಿಕೊಂಡಿರುವ ಯೋಗೇಶ್ವರ್, ಇದೇ ಮೊದಲ ಬಾರಿಗೆ (1999 ರಿಂದ ಈ ವರೆಗೂ) ಒಂದು ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ.

ಈ ವರೆಗೂ 9 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಸಿಪಿವೈಗೆ ಇದು ಆರನೇ ಗೆಲುವು.

ಚನ್ನಪಟ್ಟಣದಲ್ಲಿ ನಡೆದ 2009 ಹಾಗೂ 2011ರ ವಿಧಾನಸಭಾ ಉಪಚುನಾವಣೆಗಳಲ್ಲಿ ಗೆದ್ದು 2009ರಲ್ಲಿ ಸೋಲು ಕಂಡಿದ್ದ ಸಿಪಿವೈ, 2011ರಲ್ಲಿ ಗೆಲುವು ದಾಖಲಿಸಿದ್ದರು

20ನೇ ಸುತ್ತಿನ ಅಂತ್ಯಕ್ಕೆ ಯೋಗೇಶ್ವರ್ 1,12,388 ಮತ ಪಡೆದಿದ್ದಾರೆ. ಎನ್ಡಿಎ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,031 ಮತಗಳನ್ನು ಗಳಿಸಿದ್ದಾರೆ.

ಯೋಗೇಶ್ವರ್ಗೆ ಒಟ್ಟು 25,357 ಮತಗಳ ಅಂತರದ ಗೆಲುವು ದೊರೆತಿದೆ.

ಸಂಡೂರು(ಬಳ್ಳಾರಿ): ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಂಡೂರಿನ ವಿಜಯ ವೃತ್ತದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆದಿದೆ.

ಪಟಾಕಿ ,ಹಾರ,ಡಿಜೆಯೊಂದಿಗೆ ಸಿದ್ದಗೊಂಡಿರುವ ಕಾರ್ಯಕರ್ತರು ಅನ್ನಪೂರ್ಣ ತುಕಾರಾಂ ಆಗಮನಕ್ಕೆ ಕಾದು ಕುಳಿತಿದ್ದಾರೆ.