ಸುದ್ದುಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, 'ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು' ಎಂದರು.
.'ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು' ಎಂದೂ ಹೇಳಿದರು.