ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸೂಚನೆ ಸಿಗುತ್ತಿದ್ದಂತೆ, ದೂರುದಾರರು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ದೂರದಾರರ ಪೈಕಿ, ವಕೀಲ ಟಿ.ಜೆ. ಅಬ್ರಹಾಂ, ‘ನಾವು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರವೇ ಕೇವಿಯಟ್ ಸಲ್ಲಿಸಿದ್ದೇವೆ’ ಎಂದರು.

ಮತ್ತೊಬ್ಬ ದೂರುದಾರ ಪ್ರದೀಪ್ ಕುಮಾರ್, ‘ನಾನು ಈಗಾಗಲೇ ಹೈಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದೇನೆ. ಅಲ್ಲದೆ, ಆನ್‌ಲೈನ್ ಮೂಲಕ ಸುಪ್ರೀಂ ಕೋರ್ಟ್‌ಗೂ ಕೇವಿಯಟ್ ಅರ್ಜಿ ಹಾಕಿದ್ದೇನೆ. ನನಗೆ ಸಿಕ್ಕಿದ ಮಾಹಿತಿ ಪ್ರಕಾರ ಅವರು (ಮುಖ್ಯಮಂತ್ರಿ) ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಬುಧವಾರ ಮೇಲ್ಮನವಿ ಸಲ್ಲಿಸಲಿದ್ದಾರೆ. ನಾವು ಕೂಡಾ ಕೋರ್ಟ್‌ಗೆ ಹಾಜರಾಗಲು ಸಿದ್ಧತೆ ನಡೆಸಿದ್ದೇವೆ’ ಎಂದರು.

ಮತ್ತೊಮ್ಮ ದೂರುದಾರ ಸ್ನೇಹಮಯಿ ಕೃಷ್ಣ, ‘ಅವರು (ಮುಖ್ಯಮಂತ್ರಿ) ಮೇಲಿನ ಕೋರ್ಟ್‌ಗಳಿಗೆ ಹೋದರೆ, ನಾನೂ ಹೋರಾಟ ಮುಂದುವರಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.