ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನಿರ್ಧಾರವನ್ನು ಗೌರವಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮುಡಾದಿಂದ ಪಡೆದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಮುಡಾ ಆಯುಕ್ತರಿಗೆ ಪತ್ರ ಬರೆದಿರುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ‘ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ’ ಎಂದಿದ್ದಾರೆ.

‘ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆ
ಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
.ಮುಡಾ ನಿವೇಶನ ಹಿಂದಿರುಗಿಸಲು CM ಪತ್ನಿ ನಿರ್ಧಾರ: ಅಶೋಕ, ವಿಜಯೇಂದ್ರ ಹೇಳಿದ್ದೇನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.