ಬೆಂಗಳೂರು: ನಾಗಮಂಗಲ ಗಲಭೆ ಕುರಿತು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ಸರ್ಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ಕುರಿತು ಸರಣಿ ‘ಎಕ್ಸ್’ ಮಾಡಿರುವ ಅವರು ಸರ್ಕಾರಕ್ಕೆ ಪ್ರಶ್ನೆಗಳನ್ನೂ ಕೇಳಿದ್ದಾರೆ.
.ನಾಗಮಂಗಲ ಗಲಭೆ ಪ್ರಕರಣ | ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ: ಅಶೋಕ.ನಾಗಮಂಗಲ ಗಲಭೆ: ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅಮಾನತು.
ಸರ್ಕಾರಕ್ಕೆ ಅಶೋಕ ಪ್ರಶ್ನೆಗಳು...

* ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ, ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ?

* ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ?

* ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ?

* ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?

* ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?

* ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್ಐಆರ್ ನಲ್ಲಿ ಎ1 ಮಾಡಿರುವುದೇಕೆ?

* ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?

* ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?

* ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?

* ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, ₹25 ಕೋಟಿ ಮೊತ್ತದ ಆಸ್ತಿ ನಷ್ಟವಾದರೂ, ಗೃಹ ಸಚಿವರಿಗೆ ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣವೇನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?

* ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇನ್ನೂ ಭೇಟಿ ನೀಡಿಲ್ಲವೇಕೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.