ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ | ಆರ್‌ಬಿಐಗೆ ಯೂನಿಯನ್‌ ಬ್ಯಾಂಕ್‌ ದೂರು ನೀಡಿದೆ: ಸಿಎಂ

ದಾಖಲೆ ತೋರಿಸಿದ ಸಿ.ಎಂ
Published : 19 ಜುಲೈ 2024, 13:49 IST
Last Updated : 19 ಜುಲೈ 2024, 13:49 IST
ಫಾಲೋ ಮಾಡಿ
Comments

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವಲ್ಲಿ ಯೂನಿಯನ್‌ ಬ್ಯಾಂಕ್‌ನ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂದು ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರೇ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ಪತ್ರ ಬರೆದಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾಂಕ್‌ನ ಇಬ್ಬರು ಅಧಿಕಾರಿಗಳ ವಿರುದ್ಧವೇ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರು ದೂರು ನೀಡಿದ್ದಾರೆ. ಇಬ್ಬರು ಅಧಿಕಾರಿಗಳು ಹಲವು ಹಂತದಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಮತ್ತು ಕರ್ತವ್ಯ ಲೋಪ ಮಾಡಿದ್ದರಿಂದ ₹89.63 ಕೋಟಿ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ’ ಎಂದರು.

ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ಯೂನಿಯನ್‌ ಬ್ಯಾಂಕ್‌, ಆರ್‌ಬಿಐಗೆ ನೀಡಲಾಗಿದೆ ಎನ್ನಲಾದ ವರದಿಯ ಅಂಶಗಳನ್ನು ಅವರು ಬಿಡುಗಡೆ ಮಾಡಿದರು. ‘ಅಕ್ರಮದಲ್ಲಿ ಅವರ ಪಾತ್ರವೂ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು ತನಿಖೆ ನಡೆಸಬೇಕು ಎಂದು ಯೂನಿಯನ್‌ ಬ್ಯಾಂಕ್‌ ದೂರಿನಲ್ಲಿ ಕೋರಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT