ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣದ ಹೊಣೆ ಹೊತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ಕಾರ್ಯಕರ್ತರು ಗುರುವಾರ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ ಬಳಿ ಏಕಾಏಕಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ಸಚಿವರಿಗೆ ಧಿಕ್ಕಾರ’, ‘ಸರ್ಕಾರಕ್ಕೆ ಧಿಕ್ಕಾರ’ ಮುಂತಾದ ಘೋಷಣೆಗಳನ್ನು ಹಾಕಿದರು. ತಕ್ಷಣವೇ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.

ಶಾಂತಿಯುತ ಪ್ರತಿಭಟನೆ ಮುಂದಾದ ಪಕ್ಷದ ಕಾರ್ಯಕರ್ತರನ್ನು ಬಂಧಿಸಿ, ಪೊಲೀಸರು ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕೂಡಲೇ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ಪೊಲೀಸರನ್ನು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.