ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ ಮಾಡುತ್ತಿದೆ. ಪಾಸ್ ಪೋರ್ಟ್ ರದ್ದತಿಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೂ ಕೇಂದ್ರ ಸರ್ಕಾರ ಏನು ಮಾಡುತ್ತಿಲ್ಲ ಎಂದು ಆರೋಪಿಸಿದರು.

ಮಹಿಳೆಯರ ಮೇಲೆ ಅನ್ಯಾಯ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ, ಪ್ರಜ್ವಲ್ ನನ್ನ ಮಗ ಅಂತಿದ್ದರು. ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಈಗ ಕ್ರಮ ಯಾಕೆ ವಹಿಸುತ್ತಿಲ್ಲ ಎಂದು ಕೇಳಿದರು.

ಸಂತ್ರಸ್ತ ಮಹಿಳೆ ಅಪಹರಣ ಮಾಡಲಾಗಿದೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಹೆಣ್ಣುಮಗಳು ಎಲ್ಲಿ ಹೋಗಿದ್ದಾರೆ ಎಂದು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಪ್ರಜ್ವಲ್ ಕುಟುಂಬ ಬೇರೆ ಎಂದಿದ್ದ ಕುಮಾರಸ್ವಾಮಿ, ವಕೀಲರನ್ನು ಕರೆಯಿಸಿ ಯಾಕೆ ಚರ್ಚೆ ಮಾಡುತ್ತಿದ್ದಾರೆ ಎಂದರು.
.ಸಂಪಾದಕೀಯ| ಪ್ರಜ್ವಲ್ ರೇವಣ್ಣ ಪ್ರಕರಣ: ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸಿ.ಅಂತರರಾಷ್ಟ್ರೀಯ ಮಾಧ್ಯಮಗಳಲ್ಲೂ ಪ್ರಜ್ವಲ್ ರೇವಣ್ಣ ಸುದ್ದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.