ಮೈಸೂರು: ‘2002ರ ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರವಿತ್ತು’ ಎಂದು ಆರೋಪಿಸಿ ಬಿಬಿಸಿ ಹೊರತಂದಿರುವ ಸಾಕ್ಷ್ಯಚಿತ್ರದ ಬಗ್ಗೆ ಸಾಹಿತಿ ಎಸ್.ಎಲ್ ಬೈರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದ್ಮಭೂಷಣ ಪುರಸ್ಕಾರ ದೊರೆತಿದ್ದಕ್ಕೆ, ಇಲ್ಲಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಅಭಿನಂದನೆ ಸ್ವೀಕರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

‘ಈಗ ಅದು ಹೊರಬಂದಿದ್ದೇಕೆ? ಜಿ–20 ಶೃಂಗಸಭೆಗೆ ಉತ್ತಮ ಅರ್ಥಶಾಸ್ತ್ರಜ್ಞರನ್ನು ಆಯ್ಕೆ ಮಾಡಿದ್ದನ್ನು ತಡೆಯಲಾಗದೇ ಇಂಥದ್ದೆಲ್ಲ ಶುರು ಮಾಡಿಕೊಂಡಿದ್ದಾರೆ. ಹಳೆಯದ್ದನ್ನೆಲ್ಲಾ ಈಗ ತೆಗೆದಿದ್ದಾರೆ’ ಎಂದು ಭೈರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.