ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯದುವೀರ–ತ್ರಿಷಿಕಾ ಪುತ್ರನ ನಾಮಕರಣ

Published : 25 ಫೆಬ್ರುವರಿ 2018, 19:30 IST
ಫಾಲೋ ಮಾಡಿ
Comments

ಮೈಸೂರು: ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ಅವರ ಪುತ್ರನಿಗೆ ಆದ್ಯವೀರ್‌ ನರಸಿಂಹರಾಜ ಒಡೆಯರ್‌ ಎಂದು ನಾಮಕರಣ ಮಾಡಲಾಗಿದೆ.

ಬೆಂಗಳೂರಿನ ಅರಮನೆಯಲ್ಲಿ ಭಾನುವಾರ ನಾಮಕರಣ ಶಾಸ್ತ್ರ ನೆರವೇರಿತು. ಈ ವಿಚಾರವನ್ನು ಯದುವೀರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಕುಲದೇವತೆ ಚಾಮುಂಡೇಶ್ವರಿ ಅಮ್ಮನವರ ಆಶೀರ್ವಾದದಿಂದ ಪುತ್ರನ ನಾಮಕರಣ ಪದ್ಧತಿಯ ಪ್ರಕಾರ ನಡೆಯಿತು’ ಎಂದಿದ್ದಾರೆ.

ಪ್ರಮೋದಾದೇವಿ ಒಡೆಯರ್‌ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ತ್ರಿಷಿಕಾ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಡಿ.6ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT