ಢಾಕಾ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಕೂಟ 293 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಅವರ ಆಪ್ತರು ಗುರುವಾರ ತಿಳಿಸಿದ್ದಾರೆ.

ಹಸೀನಾ ಬುಧವಾರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಮೋದಿ ಅವರು ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಹಸೀನಾ ಅವರು ನಾಳೆ (ಶುಕ್ರವಾರ) ಸಂಜೆ 4ಕ್ಕೆ ಢಾಕಾದಿಂದ ನವದೆಹಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೂನ್ 9ರಂದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಶ್ರೀಲಂಕಾ, ಭೂತಾನ್, ನೇಪಾಳ ಮತ್ತು ಮಾರಿಷಸ್ನ ಉನ್ನತ ನಾಯಕರು ಪಾಲ್ಗೊಳ್ಳುವ ಸಾಧ್ಯತೆಯಿದೆ.
.ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ: ಜೂನ್ 8ರ ಬದಲಾಗಿ 9ಕ್ಕೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.