ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರಂಪ್ ಹತ್ಯೆಗೆ ಯತ್ನ: ಗುಂಡಿನ ದಾಳಿ ನಡೆಸಿದ ಶಂಕಿತನ ಪತ್ತೆ ಮಾಡಿದ ಎಫ್‌ಬಿಐ

Published : 14 ಜುಲೈ 2024, 4:37 IST
Last Updated : 14 ಜುಲೈ 2024, 4:37 IST
ಫಾಲೋ ಮಾಡಿ
Comments

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತನನ್ನು ಫೆಡರಲ್‌ ಬ್ಯೂರೊ ಆಫ್‌ ಇನ್ವೆಸ್ಟಿಗೇಷನ್‌ (ಎಫ್‌ಬಿಐ) ಪತ್ತೆ ಮಾಡಿದೆ ಎಂದು ವರದಿಯಾಗಿದೆ.

ಪೆನ್ಸಿಲ್ವೇನಿಯಾದಲ್ಲಿ ಶನಿವಾರ ಸಂಜೆ ಆಯೋಜನೆಗೊಂಡಿದ್ದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಟ್ರಂಪ್ ಅವರ ಮೇಲೆ ದಾಳಿ ನಡೆದಿದೆ. ಈ ವೇಳೆ ಪ್ರೇಕ್ಷಕನೊಬ್ಬ ಮೃತಪಟ್ಟು, ಟ್ರಂಪ್‌ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

20 ವರ್ಷದ ವ್ಯಕ್ತಿಯನ್ನು ಶಂಕಿತ ಬಂಧೂಕುಧಾರಿ ಎಂದು ಎಫ್‌ಬಿಐ ಗುರುತಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸಿಎನ್‌ಎನ್‌ ವರದಿಗಾರರೊಬ್ಬರು ಎಕ್ಸ್‌/ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಆದಾಗ್ಯೂ, ಎಫ್‌ಬಿಐ ಶಂಕಿತನ ವಿವರ ವಿವರ ಬಹಿರಂಗಪಡಿಸಿಲ್ಲ.

78 ವರ್ಷದ ಟ್ರಂಪ್ ಅವರು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಟ್ರಂಪ್ ಬಿಡುಗಡೆಯಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT