ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಹಿಂದೂ ದೇವಸ್ಥಾನದ ಮೇಲೆ ದಾಳಿ ನಡೆಸಿರುವ ದರೋಡೆಕೋರರು, ದೇಗುಲದಲ್ಲಿದ್ದ ದೇಣಿಗೆಯ ಪೆಟ್ಟಿಗೆಯನ್ನು ಹೊತ್ತೊಯ್ದಿದ್ದಾರೆ. ಇದು ಅಮೆರಿಕದಲ್ಲಿರುವ ಭಾರತೀಯ ಸಮುದಾಯವನ್ನು ಆತಂಕಗೊಳಿಸಿದೆ.

ಹರಿ ಓಂ ರಾಧಾ ಕೃಷ್ಣ ದೇವಾಲಯದಲ್ಲಿ ಸೋಮವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಇಲ್ಲಿನ ಪತ್ರಿಕೆಯೊಂದು ವರದಿ ಮಾಡಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೇವಸ್ಥಾನದಲ್ಲಿ ಏನೆಲ್ಲಾ ಕಳ್ಳತನವಾಗಿದೆ ಎಂಬ ಕುರಿತು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ, ದೇಣಿಗೆ ಪೆಟ್ಟಿಗೆ ಹೊತ್ತೊಯ್ದಿರುವುದನ್ನು ಖಚಿತಪಡಿಸಿದ್ದಾರೆ.

ಈ ಕೃತ್ಯದಲ್ಲಿ ಆರು ಮಂದಿ ಶಂಕಿತರು ಭಾಗಿಯಾಗಿದ್ದು, ಇಬ್ಬರು ದೇವಸ್ಥಾನದ ಒಳಗೆ ನುಗ್ಗಿರುವುದು ವಿಡಿಯೊದಲ್ಲಿ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.