ಬೈರೂತ್ : ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ 10 ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿಯ ಮಾಧ್ಯಮ ವರದಿ ಮಾಡಿದೆ.

ಈ ಬೆನ್ನಲ್ಲೇ, ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಲೆಬನಾನ್‌ನ ಹಿಜ್ಬುಲ್ಲಾ ಬಂಡುಕೋರ ಪಡೆ ಹೇಳಿದೆ.

ಹಿಜ್ಬುಲ್ಲಾ ಪಡೆಯು ಇಸ್ರೇಲ್‌ನ ಸಫೇದ್ ಪಟ್ಟಣದ ಮೇಲೆ ಬುಧವಾರ ದಾಳಿ ನಡೆಸಿತ್ತು. ಈ ವೇಳೆ ಇಸ್ರೇಲ್‌ನ ಯೋಧೆ ಮೃತಪಟ್ಟಿದ್ದರು ಮತ್ತು ಎಂಟು ಮಂದಿ ಇತರರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಸ್ರೇಲ್ ದಾಳಿ ನಡೆಸಿದೆ.

ದಾಳಿಯಲ್ಲಿ ಲೆಬನಾನ್‌ನ ನಾಬಾತಿಯೇಹ್ ಪಟ್ಟಣದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಸೌವಾನೆಹ್‌ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಆರಂಭವಾದಾಗಿನಿಂದ ಇಸ್ರೇಲ್– ಲೆಬನಾನ್ ಗಡಿಯಲ್ಲಿ ಘರ್ಷಣೆ ನಡೆಯುತ್ತಿದೆ. ಆದರೆ ಬುಧವಾರ ನಡೆದಿದ್ದು ಅತ್ಯಂತ ಭೀಕರ ದಾಳಿ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.