ವಿಶ್ವಸಂಸ್ಥೆ: ಪಾಕಿಸ್ತಾನದ ಉಸ್ತುವಾರಿ ಪ್ರಧಾನಮಂತ್ರಿ ಅನ್ವರ್ ಉಲ್ ಹಕ್ ಕಾಕರ್ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು– ಕಾಶ್ಮಿರ ವಿಷಯ ಉಲ್ಲೇಖಿಸಿದ್ದಾರೆ.

‘ಭಾರತ– ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಕಾಶ್ಮೀರ ವಿಷಯವೇ ನಿರ್ಣಾಯಕವಾದುದು’ ಎಂದು ಪ್ರತಿಪಾದಿಸಿದ್ದಾರೆ. ಸಭೆಯ ಕಾರ್ಯಸೂಚಿ ಯಾವುದೇ ಇರಲಿ, ಪಾಕಿಸ್ತಾನ ಆಗಿಂದಾಗ್ಗೆ ವಿಶ್ವಸಂಸ್ಥೆಯ ವಿವಿಧ ವೇದಿಕೆಗಳಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸುತ್ತಿದೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 78ನೇ ಅಧಿವೇಶನ ಉದ್ದೇಶಿಸಿ ಮಾತನಾಡಿದ ಕಾಕರ್ ಅವರು, ‘ಭಾರತ ಸೇರಿದಂತೆ ತನ್ನ ನೆರೆಯ ರಾಷ್ಟ್ರಗಳ ಜೊತೆಗೆ ಶಾಂತಿಯುತ ಮತ್ತು ಫಲಪ್ರದವಾದ ಬಾಂಧವ್ಯವನ್ನು ಹೊಂದಲು ಬಯಸುತ್ತದೆ’ ಎಂದು ಹೇಳಿದರು

ಕಾಶ್ಮೀರ ಕುರಿತಂತೆ ತನ್ನ ನಿರ್ಣಯ ಜಾರಿಗೊಳಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಒತ್ತು ನೀಡಬೇಕು. ಭಾರತ ಮತ್ತು ಪಾಕಿಸ್ತಾನಕ್ಕೆ ಅನ್ವಯಿಸುವಂತೆ ವಿಶ್ವಸಂಸ್ಥೆಯು ಸೇನಾ ವೀಕ್ಷಣಾ ಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.