ಲಾಹೋರ್: ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸರಕು ಸಾಗಣೆ ರೈಲಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ರೈಲೊಂದು ಡಿಕ್ಕಿ ಹೊಡೆದಿದ್ದು, 31ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ನಡೆದಿದೆ.

ಶೇಖಾಪುರ ಜಿಲ್ಲೆಯ ಕಿಲಾ ಸತ್ತಾರ್ ಶಾ ರೈಲ್ವೆ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.

ಮಿಯಾನ್ವಾಲಿಯಿಂದ ಲಾಹೋರ್ಗೆ ತೆರಳುತ್ತಿದ್ದ ರೈಲು ನಿಲ್ಲುವ ಹಳಿಯ ಮೇಲೆಯೇ ಸರಕು ಸಾಗಣೆ ರೈಲು ನಿಂತ ಪರಿಣಾಮ ಅಪಘಾತ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ರಕ್ಷಣಾ ಸಿಬ್ಬಂದಿ ರೈಲಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸಿದ್ದು, ಯಾವುದೇ ಪ್ರಾಣಹಾನಿ ಉಂಟಾಗಿಲ್ಲ, ಆದರೆ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ನಡೆದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಳಿಕ ರೈಲು ಹಳಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ರೈಲ್ವೆ ಚಾಲಕ ಮತ್ತು ಸಹಾಯಕನನ್ನು ಅಮಾನತು ಮಾಡಲಾಗಿದೆ ಎಂದು ರೈಲ್ವೆ ವಕ್ತಾರರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.