ನವದೆಹಲಿ: ಎರಡು ದಿನಗಳ ಸಿಂಗಪುರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಡೋಲು ಬಾರಿಸುವ ಮೂಲಕ ಸಂಭ್ರಮಿಸಿದ್ದಾರೆ.

ಈ ಸಂಬಂಧ ವಿಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಹಂಚಿಕೊಂಡಿದ್ದಾರೆ.

'ಥ್ಯಾಂಕ್ ಯು ಸಿಂಗಪುರ! ಈ ಸ್ವಾಗತವು ನಿಜಕ್ಕೂ ರೋಮಾಂಚನವೆನಿಸಿತು' ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಬ್ರೂನೈಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಅವರು ಅಲ್ಲಿಂದ ಸಿಂಗಪುರಕ್ಕೆ ಭೇಟಿ ನೀಡಿದ್ದಾರೆ.

ಸಿಂಗಪುರದಲ್ಲಿ ಮೋದಿ ಅವರಿಗೆ ಭಾರತೀಯ ಸಮುದಾಯದವರು ಭವ್ಯ ಸ್ವಾಗತ ನೀಡಿದ್ದಾರೆ. ಈ ವೇಳೆ ಭಾರತೀಯ ಸಾಂಸ್ಕೃತಿಕ ನೃತ್ಯಗಳ ವೈಭವವನ್ನು ಪ್ರದರ್ಶಿಸಲಾಯಿತು.

ಇದನ್ನು ವೀಕ್ಷಿಸಿದ ಪ್ರಧಾನಿ ಮೋದಿ, ಬಳಿಕ ಸ್ವತಃ ತಾವೇ ಡೋಲು ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ಅಭಿಮಾನಿಗಳಿಗೆ ಹಸ್ತಾಕ್ಷರವನ್ನು ನೀಡಲು ಮರೆಯಲಿಲ್ಲ.

ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ.

ಸಿಂಗಪುರಕ್ಕೆ ಬಂದಿಳಿದ ಪ್ರಧಾನಿ ಮೋದಿ, 'ಭಾರತ ಹಾಗೂ ಸಿಂಗಪುರ ನಡುವಣ ಬಾಂಧವ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆಯನ್ನು ಎದುರು ನೋಡುತ್ತಿದ್ದೇನೆ' ಎಂದು ತಿಳಿಸಿದ್ದಾರೆ.

ಸಿಂಗಪುರದ ಉದ್ಯಮಿಗಳೊಂದಿಗೂ ಪ್ರಧಾನಿ ಮೋದಿ ಸಮಾಲೋಚನೆ ನಡೆಸಲಿದ್ದಾರೆ.
.ಬ್ರೂನೈ ರಾಜ ಹಸನಲ್ ಬೊಲ್ಕಿಯಾ ಭೇಟಿಯಾದ ಪ್ರಧಾನಿ ಮೋದಿ.Manipur Violence| ಮಣಿಪುರದ ಜನರನ್ನು ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ:ಖರ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.