ವಿಶ್ವಸಂಸ್ಥೆ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಜನಾಂಗೀಯ ದಾಳಿ ಅಥವಾ ಹಿಂಸೆಗೆ ಪ್ರಚೋದನೆಗೆ ನೀಡುವ ಕೃತ್ಯಗಳನ್ನು ನಾವು ವಿರೋಧಿಸುತ್ತೇವೆ ಎಂದು ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ.
.Bangla Unrest | ನಾಗರಿಕರ ಸುರಕ್ಷತೆಗೆ ಆದ್ಯತೆ: ಮೊಹಮ್ಮದ್ ಯೂನಸ್.
‘ಇತ್ತೀಚಿನ ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಬೇಕು ಎನ್ನುವುದನ್ನು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಜನಾಂಗೀಯ ಹಲ್ಲೆ ಅಥವಾ ಜನಾಂಗೀಯ ಹಿಂಸೆಗೆ ಪ್ರಚೋದನೆ ನೀಡುವುದರ ವಿರುದ್ಧ ನಾವಿದ್ದೇವೆ’ ಎಂದು ಕಾರ್ಯದರ್ಶಿಗಳ ಉಪ ವಕ್ತಾರ ಫರ್ಹಾನ್ ಹಖ್ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
.Bangla Unrest: ಭಾರತಕ್ಕೆ ಮರಳಿದವರ ಬಗ್ಗೆ ರಾಜ್ಯಸಭೆಗೆ ಸರ್ಕಾರ ಮಾಹಿತಿ.
ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ ಬಳಿಕ, ಹಲವು ಹಿಂದೂ ದೇಗುಲಗಳು ಹಾಗೂ ವ್ಯಾಪಾರ ಕಟ್ಟಡಗಳನ್ನು ಧ್ವಂಸ ಮಾಡಲಾಗಿತ್ತು. ಹಸೀನಾ ಅವರ ಅವಾಮಿ ಲೀಗ್ನ ಎರಡು ಹಿಂದೂ ನಾಯಕರನ್ನು ಹತ್ಯೆ ಮಾಡಲಾಗಿತ್ತು.

ಹಸೀನಾ ಅವರ ಪಲಾಯನದ ಬಳಿಕ, ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯದ ಹೆಚ್ಚಳವಾಗುತ್ತಿದೆ. ಖ್ಯಾತ ಗಾಯಕ ರಾಹುಲ್ ಅನಂದ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.
.Bangla Unrest | ಢಾಕಾಗೆ ಬಂದ ಯೂನಸ್; ವಿದ್ಯಾರ್ಥಿಗಳಿಂದ ಉಳಿದ ದೇಶ ಎಂದು ಬಣ್ಣನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.