ಧರ್ಮಶಾಲಾ: ಇಂಗ್ಲೆಂಡ್ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ನಲ್ಲಿ 700 ವಿಕೆಟ್ಗಳನ್ನು ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ, ದಿವಂಗತ ಶೇನ್ ವಾರ್ನ್ ಅವರ ಬಳಿಕ 700 ವಿಕೆಟ್ ಗಡಿ ದಾಟಿದ ಮೂರನೇ ಬೌಲರ್ ಆಗಿದ್ದಾರೆ. ಸ್ಪಿನ್ ಮಾಂತ್ರಿಕರಾದ ಮುರಳೀಧರನ್ 800, ಶೇನ್ ವಾರ್ನ್ 708 ವಿಕೆಟ್ ಪಡೆದಿದ್ದಾರೆ.

ಭಾರತ ವಿರುದ್ದ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಆ್ಯಂಡರ್ಸನ್ ಈ ಸಾಧನೆ ಮಾಡಿದ್ದಾರೆ. ಪಂದ್ಯದ ಎರಡನೇ ದಿನವಾದ ನಿನ್ನೆ ಶುಭಮನ್ ಗಿಲ್ ವಿಕೆಟ್ ಪಡೆಯುವ ಮೂಲಕ 699 ವಿಕೆಟ್ಗಳ ಸಂಪಾದಿಸಿದ್ದರು. ಮೂರನೇ ದಿನವಾದ ಶನಿವಾರ ಕುಲದೀಪ್ ಯಾದವ್ ವಿಕೆಟ್ ಪಡೆಯುವ ಮೂಲಕ 700 ವಿಕೆಟ್ಗಳನ್ನು ಪಡೆದ ಶ್ರೇಯಕ್ಕೆ ಪಾತ್ರರಾದರು.

41 ವರ್ಷದ ಆ್ಯಂಡರ್ಸನ್ ಈಗಲೂ ಇಂಗ್ಲೆಂಡ್ ತಂಡದ ಬೌಲಿಂಗ್ ವಿಭಾಗದ ಮುಂದಾಳು. 2002ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯವಾಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಅಡಿ ಇರಿಸಿದರು. 2003ರಲ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಇದುವರೆಗೆ ಇಂಗ್ಲೆಂಡ್ ಪರ ಅವರು 186 ಟೆಸ್ಟ್ ಪಂದ್ಯಗಳನ್ನು ಆಡಿ 700 ವಿಕೆಟ್ ಪಡೆದಿದ್ದಾರೆ.

ಟೆಸ್ಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಭಾರತದ ಅನಿಲ್ ಅನಿಲ್ ಕುಂಬ್ಳೆ 619 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರು 511 ವಿಕೆಟ್ಗಳ ಮೂಲಕ 9ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.