ಲಾಹೋರ್: ಪಾಕಿಸ್ತಾನ ಕ್ರಿಕೆಟ್ ಮಂಡಳಿಯ(ಪಿಸಿಬಿ) ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಮಾಜಿ ವೇಗದ ಬೌಲರ್ ವಹಾಬ್ ರಿಯಾಜ್ ಅವರನ್ನು ನೇಮಕ ಮಾಡಲಾಗಿದೆ. ವಾರದ ಹಿಂದಷ್ಟೇ ಮಾಜಿ ಕ್ರಿಕೆಟಿಗ ಇಂಜಮಮ್ ಉಲ್ ಹಕ್ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಷ್ಟ್ರೀಯ ತಂಡದ ಆಟಗಾರರನ್ನು ನಿರ್ವಹಿಸುವ ಕಂಪನಿಯೊಂದರ ಜೊತೆಗಿನ ಅವರ ಸಂಬಂಧವು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆಯೇ ಎಂಬ ಕುರಿತು ತನಿಖೆ ನಡೆಸಲು ಪಿಸಿಬಿ ಪ್ರಾರಂಭಿಸಿದ ನಂತರ ಇಂಜಮಾಮ್ ಅಕ್ಟೋಬರ್ 30ರಂದು ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

38 ವರ್ಷದ ವಹಾಬ್ ರಿಯಾಜ್ ಅವರ ಮುಂದಿರುವ ಮೊದಲ ಸವಾಲೆಂದರೆ, ಆಸ್ಟ್ರೇಲಿಯಾದ ಟೆಸ್ಟ್ ಪ್ರವಾಸ ಮತ್ತು ನ್ಯೂಜಿಲೆಂಡ್‌ನ ಟಿ20 ಸರಣಿಗೆ ತಂಡವನ್ನು ಆಯ್ಕೆ ಮಾಡುವುದಾಗಿದೆ.

ರಿಯಾಜ್ ಜೊತೆಗಿನ ಚರ್ಚೆ ಬಳಿಕ ಆಯ್ಕೆ ಸಮಿತಿಯ ಇತರೆ ಸದಸ್ಯರನ್ನು ಪಿಸಿಬಿ ಕೆಲ ದಿನಗಳಲ್ಲಿ ಘೋಷಿಸುವ ಸಾಧ್ಯತೆ ಇದೆ.

ರಿಯಾಜ್ ಅವರು ಪಾಕಿಸ್ತಾನದ ಪಂಜಾಬ್ ರಾಜ್ಯ ಸರ್ಕಾರದ ಕ್ರೀಡಾ ಸಲಹೆಗಾರರಾಗಿದ್ದಾರೆ. 2020ರಿಂದ ಅವರು ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಆಡಿಲ್ಲ. ಆದರೆ, ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಸಕ್ರಿಯರಾಗಿದ್ದಾರೆ.

ಏಕದಿನ ವಿಶ್ವಕಪ್‌ನಲ್ಲಿ ವೈಫಲ್ಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
.ವಿಶ್ವಕಪ್‌ನಲ್ಲಿ ಬಾಬರ್ ಅಜಂ ವೈಫಲ್ಯ: ಕಾರಣ ಹೇಳಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.