ಮುಂಬೈ: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ರನ್‌ಗಳ ಪ್ರವಾಹವನ್ನೇ ಹರಿಸುತ್ತಿರುವ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶದ ವಿರುದ್ಧ 382 ರನ್ ಪೇರಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದಕೊಂಡು 382 ರನ್ ಪೇರಿಸಿತು. ಈ ಪಂದ್ಯವನ್ನು ಬಾಂಗ್ಲಾ ದೇಶ ಗೆಲ್ಲಬೇಕಾದರೆ 383 ರನ್‌ಗಳಿಸಬೇಕಿದೆ.

ಅಗ್ರ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸಿಡಿಲಬ್ಬರದ ಬ್ಯಾಟಿಂಗ್‌ನಿಂದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು. ಕ್ವಿಂಟನ್ ಡಿಕಾಕ್ 174, ಏಡನ್ ಮರ್ಕರಂ 60, ಹೆನ್ರಿಚ್ ಕ್ಲಾಸೆನ್ 90 ರನ್ ಬಾರಿಸಿದರು.

ಬಾಂಗ್ಲಾ ಪರ ಹಸನ್ ಮೆಹಮೂದ 2 ವಿಕೆಟ್ ಪಡೆದರೆ, ಶೊರಿಫುಲ್ ಇಸ್ಲಾಂ, ಮೆಹದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.