ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ಭಾರತಕ್ಕೆ 274 ರನ್ಗಳ ಗೆಲುವಿನ ಗುರಿ ನೀಡಿದೆ.

ಇಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 273 ರನ್ಗಳಿಸಿತು. ಡ್ಯಾರಿಯಲ್ ಮಿಚೆಲ್ 130 ರನ್ಗಳಿಸಿದರು. ರಚಿನ್ ರವೀಂದ್ರ ಉತ್ತಮ ಪ್ರದರ್ಶನ ನೀಡುವ ಮೂಲಕ 75 ರನ್ ಗಳಿಸಿದರು.

ಭಾರತದ ಪರ ಮೊಹಮ್ಮದ್ ಶಮಿ 5, ಕುಲದೀಪ್ ಯಾದವ್ 2 ವಿಕೆಟ್ ಪಡೆದರು.

ಗಾಯಾಳು ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್ ಆಡುತ್ತಿದ್ದಾರೆ.

ಅಗ್ರಸ್ಥಾನಕ್ಕಾಗಿ ಪೈಪೋಟಿ...

ಉಭಯ ತಂಡಗಳು ಟೂರ್ನಿಯಲ್ಲಿ ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿವೆ. ಅಲ್ಲದೆ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿವೆ. ಈಗ ಈ ಪಂದ್ಯ ವಿಜೇತ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.