ನವದೆಹಲಿ (ಪಿಟಿಐ): 2016ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ‘ನೋಟು ಅಮಾನ್ಯೀಕರಣ’ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆ ಆಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 24ಕ್ಕೆ ಮುಂದೂಡಿದೆ.

ಈ ವಿಷಯದ ಕುರಿತು ಸಮಗ್ರವಾದ ಅಫಿಡವಿಟ್ ಸಲ್ಲಿಸಲು ಒಂದು ವಾರ ಸಮಯಾವಕಾಶ ನೀಡುವಂತೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೋರ್ಟ್‌ಗೆ ಮನವಿ ಮಾಡಿಕೊಂಡರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು ವಿಚಾರಣೆಯನ್ನು ಮುಂದೂಡಿತು.

ಸಮಗ್ರವಾದ ಅಫಿಡವಿಟ್ಟನ್ನು ಸಲ್ಲಿಸಲು ಸಾಧ್ಯವಾಗದ ಕಾರಣವೆಂಕಟರಮಣಿ ಅವರು ಕೋರ್ಟ್‌ಗೆ ಕ್ಷಮೆಯನ್ನೂ ಯಾಚಿಸಿದರು.

ವಿಚಾರಣೆ ಮುಂದೂಡುವಂತೆ ಸಾಂವಿಧಾನಿಕ ಪೀಠಕ್ಕೆ ಮನವಿ ಮಾಡಿರುವುದು ಮುಜುಗರದ ವಿಷಯ ಎಂದು ಪ್ರತ್ಯೇಕ ಅರ್ಜಿದಾರರ ಪರವಾಗಿ ಕೋರ್ಟ್‌ನಲ್ಲಿ ಹಾಜರಿದ್ದ ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಪಿ. ಚಿದಂಬರಂ ಅವರು ಕೋರ್ಟ್‌ಗೆ ಹೇಳಿದರು.ಸಾಂವಿಧಾನಿಕ ಪೀಠದ ಸದ್ಯರಾಗಿರುವ ನ್ಯಾಯಮೂರ್ತಿ ನಾಗರತ್ನ ಅವರು ಈ ಹೇಳಿಕೆಯನ್ನು ಅನುಮೋದಿಸಿದರು.

ನೋಟು ಅಮಾನ್ಯೀಕರಣದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ 58 ಅರ್ಜಿಗಳ ವಿಚಾರಣೆಯನ್ನು ಈ ಪೀಠವು ನಡೆಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.