ಗಾಜಿಯಾಬಾದ್: ಫ್ಲೈಓವರ್ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಗಲಾಟೆ ಮಾಡಿದ ಆರೋಪದ ಮೇಲೆ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಇಂದಿರಾಪುರಂ ಪೊಲೀಸರು ತಿಳಿಸಿದ್ದಾರೆ.

ಪೂರ್ವ ದೆಹಲಿಯ ಜಗತ್ ಪುರಿ ನಿವಾಸಿ ಅಂಶ್ ಕೊಹ್ಲಿ (21) ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಇದೇ ವೇಳೆ ಸ್ನೇಹಿತರೆಲ್ಲಾ ಸೇರಿ ಕಾರಿನ ಬಾನೆಟ್ ಮೇಲೆ ಕೇಕ್ ಕತ್ತರಿಸಿ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಆರೋಪಿಗಳು ತಮ್ಮ ಕಾರನ್ನು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಇತರೆ ಪ್ರಯಾಣಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಎಸ್ಪಿ ಜ್ಞಾನೇಂದ್ರ ಸಿಂಗ್ ಹೇಳಿದ್ದಾರೆ.

ಬಂಧಿತರಿಂದ ಎಂಟು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.