ಇಂದೋರ್: ರಾಮನವಮಿ ಆಚರಣೆ ಸಂದರ್ಭದಲ್ಲಿ ಇಲ್ಲಿನ ಪ್ರಾಚೀನ ದೇವಾಲಯವೊಂದರ ಬಾವಿಯ ಛಾವಣಿ ಕುಸಿದಿದೆ. ಈ ವೇಳೆ ಸುಮಾರು 25 ಮಂದಿ ಒಳಗೆ ಬಿದ್ದಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಭಾರಿ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಭಾರ ಹೆಚ್ಚಾಗಿ ಪುರಾತನ ಬಾವಿಯ ಛಾವಣಿ ಕುಸಿದಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆ ಸಂಬಂಧ ಕಳವಳ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

'ಇಂದೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತುಂಬಾ ನೋವಾಗಿದೆ. ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರೊಂದಿಗೆ ಮಾತನಾಡಿ, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ರಾಜ್ಯ ಸರ್ಕಾರವು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿದೆ. ಸಂತ್ರಸ್ತರು ಹಾಗೂ ಅವರ ಕುಟುಂಬದವರಿಗಾಗಿ ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.