ಪಟ್ನಾ: ‘ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ’ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಸ್ಪಷ್ಟಪಡಿಸಿದ್ದು, ಅವರ ಸ್ಪರ್ಧೆಯ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ನಾನು ದೇಶದ ಮುಂದಿನ ರಾಷ್ಟ್ರಪತಿ ಸ್ಥಾನದ ಸ್ಪರ್ಧೆಯಲ್ಲಿ ಇಲ್ಲ. ನಾನು ಎಲ್ಲಿಗೂ ಹೋಗುತ್ತಿಲ್ಲ. ಅಂತಹ ವರದಿಗಳು ಆಧಾರರಹಿತ ಮತ್ತು ಕೇವಲ ಊಹಾಪೋಹಗಳಾಗಿವೆ’ ಎಂದು ಅವರು ತಮ್ಮ ಸಾರ್ವಜನಿಕ ಸಂಪರ್ಕದ ಕಾರ್ಯಕ್ರಮದಲ್ಲಿ ಸ್ಪಷ್ಟಪಡಿಸಿದ್ದಾರೆ.

‘ರಾಷ್ಟ್ರಪತಿ ಸ್ಥಾನಕ್ಕೆ ಬೇಕಾಗಿರುವ ಎಲ್ಲ ಅರ್ಹತೆಗಳನ್ನು ನಿತೀಶ್ ಕುಮಾರ್ ಅವರು ಹೊಂದಿದ್ದಾರೆ’ ಎಂದು ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಅವರು ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಸೋಮವಾರ ನಿತೀಶ್ ಸ್ಪಷ್ಟೀಕರಣ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.