ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಅಮರ್ ಚಕ್ರದಲ್ಲಿ ವಿಲೀನಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

1971ರ ಆಗಸ್ಟ್ನಲ್ಲಿ ಸ್ವಾತಂತ್ರ್ಯೋತ್ಸವದ ಬಳಿಕ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಜ್ಯೋತಿಯನ್ನು ಉರಿಸಲಾಗಿತ್ತು. 50 ವರ್ಷದ ಬಳಿಕ ಅದನ್ನು ಸ್ಥಳಾಂತರಿಸಿ, ಅಲ್ಲಿಂದ 400 ಮೀಟರ್ ದೂರದಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕದ ಅಮರ್ ಚಕ್ರದಲ್ಲಿ ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ.

ಶುಕ್ರವಾರ ಸಂಜೆ 4 ಗಂಟೆಗೆ ಜ್ಯೋತಿ ವಿಲೀನ ಕಾರ್ಯಕ್ರಮ ನಡೆಯಲಿದೆ.

1947ರ ಬಳಿಕ ನಡೆದ ಭಾರತ–ಪಾಕಿಸ್ತಾನ ಯುದ್ಧ ಮತ್ತು ಚೀನಾ ಜತೆಗಿನ ಸಂಘರ್ಷ ಹಾಗೂ ಕರ್ತವ್ಯದಲ್ಲಿರುವಾಗ ಹುತಾತ್ಮರಾದ ಯೋಧರ ನೆನಪಿಗೆ, ಅವರ ಹೆಸರನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಮೂಡಿಸಲಾಗಿದೆ.

ನೂತನ ಸಂಸತ್ ಭವನ: ವೆಚ್ಚ ₹200 ಕೋಟಿ ಹೆಚ್ಚಳ ಸಾಧ್ಯತೆ

2019ರ ಫೆಬ್ರುವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಉದ್ಘಾಟಿಸಿದ್ದರು.

ಗುಲಾಮಗಿರಿಯಲ್ಲಿ ಕಳೆದುಕೊಂಡಿರುವುದನ್ನು ಪಡೆಯಲು ಮುಂದಿನ 25 ವರ್ಷ ಮುಖ್ಯ: ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.