ನವದೆಹಲಿ: ಬಿಹಾರದಲ್ಲಿ ರಾಜಕೀಯ ಗದ್ದಲ ತೀವ್ರಗೊಳ್ಳುವ ಸುಳಿವಿನ ಮಧ್ಯೆಯೇ ಬಿಜೆಪಿ ತನ್ನ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ಸೂಚಿಸಿದೆ.

ಪರಿಸ್ಥಿತಿಯ ಬಗ್ಗೆ ಅವಲೋಕಿಸಿ ಸೂಕ್ತ ಕಾರ್ಯತಂತ್ರ ರೂಪಿಸಿಕೊಳ್ಳಲು ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ.

ರವಿಶಂಕರ್ ಪ್ರಸಾದ್, ಶಹನವಾಜ್ ಹುಸೇನ್, ನಿತಿನ್ ನವೀನ್, ಸತೀಶ್ ಚಂದ್ರ ದುಬೆ ಅವರು ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ

ಬಿಹಾರದಲ್ಲಿ ಆಡಳಿತಾರೂಢ ಜೆಡಿ(ಯು), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಹಾಗೂ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಮಂಗಳವಾರ ಪ್ರತ್ಯೇಕವಾಗಿ ಶಾಸಕರ ಸಭೆ ಕರೆದಿವೆ. ಶಾಸಕರು, ಸಂಸದರು, ಎಂಎಲ್‌ಸಿ ಹಾಗೂ ಪಕ್ಷದ ನಾಯಕರ ಸಭೆ ಕರೆದಿರುವುದನ್ನು ಜೆಡಿ(ಯು) ರಾಷ್ಟ್ರೀಯ ಅಧ್ಯಕ್ಷ ರಾಜೀವ್ ಸಿಂಗ್ ಖಚಿತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿ(ಯು) ಪಕ್ಷಕ್ಕೆ ಆರ್.ಸಿ.ಪಿ. ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಾಗಿವೆ. ಇದೇ ಕಾರಣಕ್ಕೆ ರಾಜಕೀಯ ಪಕ್ಷಗಳು ಸಭೆ ಆಯೋಜಿಸಿವೆ ಎನ್ನಲಾಗಿದೆ.

ನಿತೀಶ್ ಬಿಜೆಪಿ ಮೈತ್ರಿ ಕೊನೆಗೊಳಿಸಿದರೆ ಜೆಡಿಯು ಜತೆ ಸೇರಲು ಸಿದ್ಧ: ಆರ್‌ಜೆಡಿ

ಈ ಮಧ್ಯೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ, ನಿತೀಶ್ ಕುಮಾರ್ ಅವರು ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡರೆ ಅವರ ಜೆಡಿ(ಯು) ಪಕ್ಷವನ್ನು ಅಪ್ಪಿಕೊಳ್ಳಲು ಸಿದ್ಧ ಎಂದು ಪ್ರತಿಪಕ್ಷ ಆರ್‌ಜೆಡಿ ಸೋಮವಾರ ಹೇಳಿದೆ.

ಭಿನ್ನಾಭಿಪ್ರಾಯವಿಲ್ಲ ಎಂದ ಉಮೇಶ್ ಕುಶ್ವಾಹ

ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರ ಸುಗಮವಾಗಿ ಮುನ್ನಡೆಯುತ್ತಿದೆ. ನಮಗೆ ಬಿಜೆಪಿ ಜತೆ ಯಾವುದೇ ಭಿನ್ನಭಿಪ್ರಾಯವಿಲ್ಲ ಎಂದು ಜೆಡಿ(ಯು) ರಾಜ್ಯ ಘಟಕದ ಅಧ್ಯಕ್ಷ ಉಮೇಶ್ ಕುಶ್ವಾಹ ಹೇಳಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆ: ನಾಳೆ ಜೆಡಿಯು ಸಭೆ ಕರೆದ ಸಿಎಂ ನಿತೀಶ್ ಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.