ಪುದುಚೇರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ ಬೆದರಿಕೆಯೊಡ್ಡಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಬಹುಮತ ಕಳೆದುಕೊಂಡು ಸರ್ಕಾರ ಪತನಗೊಂಡ ಬೆನ್ನಲ್ಲೇ ಪಕ್ಷವು ಬಿಜೆಪಿ ವಿರುದ್ಧ ಆರೋಪ ಮಾಡಿದೆ.

ಒಂದೋ ರಾಜೀನಾಮೆ ನೀಡಬೇಕು. ಅಥವಾ ಕೇಂದ್ರ ತನಿಖಾ ಸಂಸ್ಥೆಗಳಿಂದ ಕ್ರಮ ಎದುರಿಸಬೇಕಾದೀತು ಎಂದು ಶಾ ಬೆದರಿಕೆಯೊಡ್ಡಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.

ಓದಿ:ಪ್ರಜಾಪ್ರಭುತ್ವದ ಕಗ್ಗೊಲೆ: ಪುದುಚೇರಿ ಸಿಎಂ ನಾರಾಯಣಸ್ವಾಮಿ

ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ ಸಲುವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿಯು ವಿ.ನಾರಾಯಣಸ್ವಾಮಿ ಸರ್ಕಾರ ಪತನಗೊಳ್ಳುವಂತೆ ಮಾಡಿದೆ ಎಂದು ಪುದುಚೇರಿಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ‘ಡೆಕ್ಕನ್ ಹೆರಾಲ್ಡ್’ಗೆ ತಿಳಿಸಿದ್ದಾರೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಪ್ರತಿಪಕ್ಷಗಳ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

‘ಬಿಜೆಪಿಯು ಸರ್ಕಾರಗಳನ್ನು ಪತನಗೊಳಿಸಲು ತನಿಖಾ ಸಂಸ್ಥೆಗಳನ್ನು ಉಪಯೋಗಿಸಿಕೊಳ್ಳುತ್ತಿದೆ ಮತ್ತು ಅನೈತಿಕ ಮಾರ್ಗಗಳನ್ನು ಬಳಸಿಕೊಳ್ಳುತ್ತಿದೆ. ಅವರು (ಬಿಜೆಪಿಯವರು) ಚುನಾಯಿತ ಸರ್ಕಾರಗಳನ್ನು ಕಾರ್ಯನಿರ್ವಹಿಸಲು ಬಿಡುತ್ತಿಲ್ಲ. ಮೊದಲು ಅವರು ಲೆಫ್ಟಿನೆಂಟ್ ಗವರ್ನರ್ ಮೂಲಕ ಸರ್ಕಾರದ ಕಾರ್ಯಗಳಿಗೆ ಅಡ್ಡಿಪಡಿಸಿದರು. ಈಗ ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿದರು’ ಎಂದು ರಾವ್ ದೂರಿದ್ದಾರೆ.

ಓದಿ:ವಯನಾಡ್ನಲ್ಲಿ ರಾಹುಲ್ ಗಾಂಧಿ ಟ್ರ್ಯಾಕ್ಟರ್ ರ್ಯಾಲಿ: ಕೇಂದ್ರದ ವಿರುದ್ಧ ಆಕ್ರೋಶ

ಪುದುಚೇರಿ ಕಾಂಗ್ರೆಸ್ನಲ್ಲಿ ಬಂಡಾಯಕ್ಕೆ ದೆಹಲಿಯ ಬಿಜೆಪಿ ನಾಯಕತ್ವವೇ ಕಾರಣ. ಜಾರಿ ನಿರ್ದೇಶನಾಲಯ, ಸಿಬಿಐಯಂತಹ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಶಾಸಕರು ರಾಜೀನಾಮೆ ನೀಡುವಂತೆ ಮಾಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.