ಜೈಪುರ: ಪಾಕಿಸ್ತಾನದ ಏಜೆಂಟರಿಗೆ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಯೋಧರೊಬ್ಬರನ್ನು ಗುಪ್ತಚರ ಇಲಾಖೆಯು ಬಂಧಿಸಿದೆ.

22 ವರ್ಷದ ಆಕಾಶ್ ಮಹರಿಯಾ ಎಂಬವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಗುಪಚ್ತರ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಕಾಶ್ ರಾಜಸ್ಥಾನದ ಸಿಕಾರ್ ಜಿಲ್ಲೆಯ ನಿವಾಸಿಯಾಗಿದ್ದು, ಸಿಕ್ಕಿಂನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಇದನ್ನೂ ಓದಿ:ಗೋರಖ್ಪುರ: ಪಿಎಫ್ಐ ‘ತರಬೇತಿ ಕಮಾಂಡರ್’ ಬಂಧನ

ಸಾಮಾಜಿಕ ಜಾಲತಾಣಗಳಮೂಲಕ ಪಾಕಿಸ್ತಾನದ ಗುಪ್ತಚರ ಏಟೆಂಟ್‌ಗಳ ಸಂಪರ್ಕಕ್ಕೆ ಬಂದಿರುವ ಯೋಧ, ಗೌಪ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.

ಗುಪ್ತಚರ ವಿಭಾಗದ ವಿಚಾರಣೆಯ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ ಪ್ರಕರಣ ಸಂಬಂಧ ಸಮಗ್ರ ತನಿಖೆಯನ್ನು ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.