ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿ. ಎಲ್ಲರೂ ಉಚಿತವಾಗೇ ವೀಕ್ಷಿಸಲಿ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.

''ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿ. ಇದರಿಂದ ಸಿನಿಮಾವನ್ನು ಉಚಿತವಾಗೇ ನೋಡಲು ಸಾಧ್ಯವಾಗುತ್ತದೆ. ಎಲ್ಲರೂ ಚಿತ್ರವನ್ನು ವೀಕ್ಷಿಸಬಹುದು'' ಎಂದು ಅರವಿಂದ ಕೇಜ್ರಿವಾಲ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಕೇಜ್ರಿವಾಲ್, ''ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು 8 ವರ್ಷಗಳ ಕಾಲ ಆಳಿದರೂ ಆರೋಪಿಸುವುದನ್ನು ನಿಲ್ಲಿಸಿಲ್ಲ. ರಾಜಕೀಯ ಲಾಭಕ್ಕಾಗಿ ಒಂದು ಸಿನಿಮಾದ ಸಹಾಯವನ್ನು ಪಡೆಯುತ್ತಿದ್ದಾರೆ'' ಎಂದು ಟೀಕಿಸಿದರು.

ಕಂಗನಾ ಸೆಲೆಬ್ರಿಟಿಯೇ ಇರಬಹುದು, ಆದರೆ...: ಮುಂಬೈ ಕೋರ್ಟ್ ತಪರಾಕಿ

''ಕಾಶ್ಮೀರಿ ಪಂಡಿತರ ಹೆಸರಲ್ಲಿ ಕೆಲವರು ಕೋಟಿಗಳನ್ನು ಗಳಿಸುತ್ತಿದ್ದಾರೆ. ಬಿಜೆಪಿಯವರು ಸಿನಿಮಾದ ಪೋಸ್ಟರ್‌ಅನ್ನು ಅಂಟಿಸುತ್ತಿದ್ದಾರೆ. ಹಿಟ್ಲರ್ ಕೂಡ ತನ್ನ ಗುಲಾಮರಿಗೆ ಉದ್ಯೋಗವನ್ನು ನೀಡಿದ್ದ. ನಿಮಗೆ ಅವರೇನು (ಮೋದಿ) ಕೊಟ್ಟಿದ್ದಾರೆ? ಏನೇ ಆದರೂ ಕೇಜ್ರಿವಾಲ್ ನಿಮಗಾಗಿ ಕೆಲಸ ಮಾಡಲು ಸಿದ್ಧ. ನಿಮ್ಮ ಕುಟುಂಬದಲ್ಲಿ ಯಾರೊಬ್ಬರಾದರೂ ಅನಾರೋಗ್ಯಕ್ಕೆ ಒಳಗಾದರೆ ಔಷಧಿಗಳನ್ನು ಕೇಜ್ರಿವಾಲ್ ಒದಗಿಸುತ್ತಾನೆಯೇ ಹೊರತು ಮೋದಿಯಲ್ಲ. ನಿಮ್ಮ ಕಣ್ಣುಗಳನ್ನು ತೆರೆದು ನೋಡಿ. ಬಿಜೆಪಿ ಬಿಟ್ಟು ಎಎಪಿ ಸೇರಿ'' ಎಂದು ಕೇಜ್ರಿವಾಲ್ ಕರೆ ನೀಡಿದರು.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಬುಧವಾರ ವಿಧಾನಸಭೆಯಲ್ಲಿ ಮಾತನಾಡುವ ವೇಳೆ ಬಿಜೆಪಿ ನಾಯಕರು '...ಫೈಲ್ಸ್' ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದರು.

ಕಾಶ್ಮೀರಿ ಪಂಡಿತರಿಗೆ ಬಾಳ ಠಾಕ್ರೆ ಪೂಜ್ಯವ್ಯಕ್ತಿ: ಶಿವಸೇನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.