ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋವಿಡ್ ಇರುವುದು ಮಂಗಳವಾರ ದೃಢಪಟ್ಟಿದೆ. ತಮಗೆ ರೋಗ ಲಕ್ಷಣಗಳು ಕಡಿಮೆ ಪ್ರಮಾಣದಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.

' ನನಗೆ ಕೋವಿಡ್ ಇರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ನಾನು ಮನೆಯಲ್ಲಿ ಪ್ರತ್ಯೇಕಗೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿರಿ, ಪರೀಕ್ಷೆ ಮಾಡಿಸಿಕೊಳ್ಳಿ,' ಎಂದು ಟ್ವಿಟರ್‌ನಲ್ಲಿ ಅವರು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಭಾರಿ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದಕ್ಕೆ ಓಮೈಕ್ರಾನ್ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.

ಸೋಮವಾರ ದೆಹಲಿಯಲ್ಲಿ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 2021ರ ಮೇ 18ರ ನಂತರ ನಾಲ್ಕು ಸಾವಿರಕ್ಕೂ ಮಿಗಿಲಾದ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.